ಕೂಡಿಗೆ, ಜೂ. ೨೪: ಕೂಡಿಗೆ ಗ್ರಾಮ ಪಂಚಾಯಿತಿ, ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರ ಆರೋಗ್ಯ ತಪಾಸಣೆಗಾಗಿ ಗ್ರಾಮ ಆರೋಗ್ಯ ತಪಾಸಣೆಯ ಕಾರ್ಯಕ್ರಮವು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಂಜನಾ ದೇವಿ ನೆರವೇರಿಸಿ ಮಾತನಾಡಿ, ಇಂತಹ ಆರೋಗ್ಯ ತಪಾಸಣೆಯಿಂದ ಆರೋಗ್ಯವಂತರಾಗಿರಲು ಸಹಕಾರಿಯಾಗಿದೆ.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮೋಹಿನಿ ಮಾತನಾಡಿ, ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಗ್ರಾಮ ಮಟ್ಟದ ವಿವಿಧ ಯೋಜನೆಯ ಕಾಮಗಾರಿಗಳನ್ನು ಕೈಗೊಳ್ಳಲು ಉತ್ತಮವಾದ ಅವಕಾಶವಿದ್ದು, ಅದರ ಮೂಲಕ ಗ್ರಾಮದ ಮುಖ್ಯ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅನುಕೂಲವಾಗುವುದು, ಇದರ ಪ್ರಯೋಜನವನ್ನು ಗ್ರಾಮಸ್ಥರು ಬಳಕೆ ಮಾಡಿಕೊಳ್ಳಬೇಕು ಎಂದರು.
ಗ್ರಾಮ ಪಂಚಾಯಿತಿ ಸದಸ್ಯರಾದ ಅರುಣ್ ರಾವ್, ಅನಂತ್ ಮಾತನಾಡಿದರು. ಆರೋಗ್ಯ ತಪಾಸಣೆಯಲ್ಲಿ ಗ್ರಾಮದ ೯೬ ಮಂದಿ ನೋಂದಾಯಿತ ಕಾರ್ಮಿಕರು ತಪಾಸಣೆ ಮಾಡಿಸಿಕೊಂಡರು. ತಪಾಸಣೆಯನ್ನು ಕುಶಾಲನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳ ತಂಡದವರು ನಡೆಸಿದರು. ಕಾರ್ಯದರ್ಶಿ ಪುನೀತ್ ಸ್ವಾಗತಿಸಿ, ವಂದಿಸಿದರು.