ಸೋಮವಾರಪೇಟೆ, ಜೂ. ೨೪ : ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷರಾಗಿರುವ ಹರಪಳ್ಳಿ ರವೀಂದ್ರ ಅವರ ಹುಟ್ಟುಹಬ್ಬದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳನ್ನು ವಿತರಿಸಲಾಯಿತು.

ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದಿAದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಟ್ಟಣ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಲಾಯಿತು. ಈ ಸಂದರ್ಭ ಹರಪಳ್ಳಿ ರವೀಂದ್ರ, ಅಭಿಮಾನಿ ಸಂಘದ ಅಧ್ಯಕ್ಷ ಹೆಚ್.ಎ. ನಾಗರಾಜ್, ಕಾರ್ಯದರ್ಶಿ ರಾಜಪ್ಪ, ಸುಂಟಿಕೊಪ್ಪ ಗ್ರಾ.ಪಂ. ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ, ಖಾಸಿಂ ಸೇರಿದಂತೆ ಇತರರು ಉಪಸ್ಥಿತರಿದ್ದರು.