ಮಡಿಕೇರಿ, ಜೂ. ೨೪: ಪ್ರಸಕ್ತ ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪಿಯುಸಿ ಮತ್ತು ಪಿಯುಸಿ ಸಮನಾಂತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ ೧೫ ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ: hಣಣಠಿ://shಠಿ.ಞಚಿಡಿಟಿಚಿಣಚಿಞಚಿ.gov.iಟಿ. ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧, ಎಸ್‌ಸಿ ಮತ್ತು ಎಸ್‌ಟಿ ರೂ. ೨.೫೦ ಲಕ್ಷ, ಪ್ರವರ್ಗ-೨ಎ, ೨ಬಿ, ೩ಎ, ೩ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. ೧ ಲಕ್ಷ ಆಗಿದೆ. ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕೆ ಇಲಾಖೆಯ ವೆಬ್‌ಸೈಟ್ hಣಣಠಿ://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಅನ್ನು ನೋಡಬಹುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಯವರ ಕಚೇರಿ ಮತ್ತು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಜಿಲ್ಲಾ ಕಚೇರಿ ಮಡಿಕೇರಿ ದೂ.ಸಂ.೦೮೨೭೨-೨೯೫೬೨೮, ಮಡಿಕೇರಿ ತಾಲೂಕು ಕಚೇರಿ ಮೊ.ಸಂಖ್ಯೆ: ೮೭೬೨೪೭೬೭೯೦, ವೀರಾಜಪೇಟೆ ತಾಲೂಕು ಕಚೇರಿ ಮೊ.ಸಂಖ್ಯೆ. ೯೮೪೪೫೩೧೦೪೦, ಸೋಮವಾರಪೇಟೆ ತಾಲೂಕು ಕಚೇರಿ ಮೊ.ಸಂಖ್ಯೆ: ೯೪೮೧೭೭೨೧೪೩ ಕಚೇರಿ ವೇಳೆಯಲ್ಲಿ ಮಾಹಿತಿಯನ್ನು ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.