ಮಡಿಕೇರಿ, ಜೂ. ೨೪: ಕೊಡಗು ಸಮಾಚಾರ ವಾರ ಪತ್ರಿಕೆಯ ಸಂಪಾದಕ, ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಆಗಿದ್ದ ದಿ. ಬಿ.ಎನ್. ಮನು ಶೆಣೈ ಸಂಸ್ಮರಣೆ ಕಾರ್ಯಕ್ರಮ ತಾ. ೨೬ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಮಡಿಕೇರಿಯ ಪತ್ರಿಕಾಭವನ ಸಭಾಂಗಣದಲ್ಲಿ ನಡೆಯಲಿದೆ.
ಕೊಡಗು ಪತ್ರಿಕಾ ಭವನ ಟ್ರಸ್ಟ್ ಹಾಗೂ ಕೊಡಗು ಪತ್ರಕರ್ತರ ಸಂಘ ಮತ್ತು ಕೊಡಗು ಸಮಾಚಾರ ಅಭಿಮಾನಿ ಬಳಗ ವತಿಯಿಂದ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಪತ್ರಿಕಾ ಭವನ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ. ಕೇಶವ ಕಾಮತ್ ವಹಿಸಲಿದ್ದು, ಉದ್ಘಾಟನೆಯನ್ನು ಮಾಜಿ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ. ರಮೇಶ್ ನೆರವೇರಿಸಲಿದ್ದಾರೆ. ವಿಶೇಷ ಅತಿಥಿಗಳಾಗಿ ಮಂಗಳೂರಿನ ನಿವೃತ್ತ ಉಪನ್ಯಾಸಕ ಐವಾನ್ ಡಿಸಿಲ್ವಾ, ಮುಖ್ಯ ಅತಿಥಿಗಳಾಗಿ, ಸಮಾಜ ಸೇವಕÀ ವಿ.ಪಿ. ಶಶಿಧರ್, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರಳೀಧರ್ ಉಪಸ್ಥಿತರಿರುತ್ತಾರೆ ಎಂದು ಪತ್ರಿಕಾ ಭವನ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್ ತಿಳಿಸಿದ್ದಾರೆ.