ಮಡಿಕೇರಿ, ಜೂ. ೨೪: ಕಾಂಡನಕೊಲ್ಲಿಯ ಸ.ಹಿ.ಪ್ರಾ. ಶಾಲೆ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಅವಿರತ ಪ್ರತಿಷ್ಠಾನ ಸಂಸ್ಥೆ ಇವರ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ಹಾಗೂ ಲೇಖನ ಸಾಮಗ್ರಿಗಳನ್ನು ಉಚಿತವಾಗಿ ನೀಡಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲಾಯಿತು. ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಈ ಕೊಡುಗೆ ನೀಡಲಾಯಿತು ಎಂದು ಮುಖ್ಯ ಶಿಕ್ಷಕರು ತಿಳಿಸಿದ್ದಾರೆ.