ಕುಶಾಲನಗರ, ಜೂ. ೨೪: ಕಾಲೇಜುಗಳಲ್ಲಿ ಸ್ವಯಂ ಉದ್ಯೋಗ ಸಂಬAಧಿತ ಕೋರ್ಸ್ಗಳನ್ನು ಆರಂಭಿಸುವ ಮೂಲಕ ವಿದ್ಯಾರ್ಥಿ ಗಳಿಗೆ ಜೀವನದ ಕೌಶಲ್ಯಗಳನ್ನು ರೂಪಿಸುವ ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸುವ ಚಿಂತನೆ ಕೊಡಗು ವಿಶ್ವವಿದ್ಯಾಲಯಕ್ಕೆ ಇರುವುದಾಗಿ ಕೊಡಗು ವಿಶ್ವವಿದ್ಯಾಲಯ ಪರೀಕ್ಷಾಂಗ ಕುಲ ಸಚಿವರಾದ ಡಾ. ಸೀನಪ್ಪ ತಿಳಿಸಿದ್ದಾರೆ.
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಕುಶಾಲನಗರ ಮಹಾತ್ಮಾ ಗಾಂಧಿ ಮೆಮೋರಿಯಲ್ ಪದವಿ ಕಾಲೇಜು ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿ ಜೀವನವನ್ನು ಸದುಪಯೋಗಪಡಿಸುವ ಮೂಲಕ ಯುವ ಪೀಳಿಗೆ ತಮ್ಮನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ತೊಡಗಿಸಿ ಕೊಳ್ಳಬೇಕಾಗಿದೆ ಎಂದು ಅವರು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಖಾಸಗಿ ಸಂಸ್ಥೆಯ ಮುಖ್ಯಸ್ಥರಾದ ಎಸ್.ವಿ. ವೆಂಕಟೇಶ್ ಅವರು ಮಾತನಾಡಿ, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ದಾಸರಾಗಬಾರದು. ವಿದ್ಯಾರ್ಥಿ ಜೀವನದಲ್ಲಿ ತಾನೇನಾಗಬೇಕು ಎಂಬುವ ಕಲ್ಪನೆ ಹೊಂದಿರಬೇಕು ಎಂದು ಹೇಳಿದರು.
ವಿದ್ಯಾರ್ಥಿ ಜೀವನದಲ್ಲಿ ಕನಿಷ್ಟ ಕೆಲವು ಸಮಯಗಳ ಕಾಲ ತಮ್ಮ ಜೀವನ ರೂಪಿಸುವ ಬಗ್ಗೆ ಚಿಂತನೆ ಮೂಲಕ ಗುರಿ ಸಾಧಿಸಿ ಉತ್ತಮ ಜೀವನ ರೂಪಿಸಿಕೊಳ್ಳಬೇಕಾಗಿದೆ ಎಂದು ಕರೆ ನೀಡಿದರು.
ಗ್ರಾಮೀಣ ಭಾಗದ ಮಕ್ಕಳು ಯಾವುದೇ ಸಂದರ್ಭ ಹಿಂಜರಿಯದೆ ತಮ್ಮ ಭವಿಷ್ಯವನ್ನು ಅರ್ಥೈಸಿಕೊಳ್ಳ ಬೇಕಾಗಿದೆ ಎಂದರು. ಆಸಕ್ತಿ ಇದ್ದಲ್ಲಿ ವಿಪುಲ ಅವಕಾಶ ಬಳಸಿ ತಮ್ಮ ಗುರಿಯನ್ನು ಸಾಧಿಸಿಕೊಳ್ಳಬಹುದು ಎಂದು ಹೇಳಿದರು.
ವಿವೇಕಾನಂದ ಕಾಲೇಜು ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಎನ್.ಎನ್. ಶಂಭುಲಿAಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಸಿ.ಎಂ. ಉಮಾ ಅವರು ಮಾತನಾಡಿದರು. ಉದ್ಯೋಗ ಮೇಳದಲ್ಲಿ ಬೆಂಗಳೂರು ಮೈಸೂರು ಕುಶಾಲನಗರ ಮತ್ತಿತರ ಕಡೆಗಳಿಂದ ಹತ್ತಕ್ಕೂ ಅಧಿಕ ಕಂಪನಿಗಳು ಪಾಲ್ಗೊಂಡು ಉದ್ಯೋಗ ಆಕಾಂಕ್ಷಿಗಳ ಜೊತೆ ದಾಖಲೆಗಳನ್ನು ಪಡೆಯುವ ಮೂಲಕ ಉದ್ಯೋಗದ ಮಾಹಿತಿಗಳನ್ನು ನೀಡಲಿದ್ದಾರೆ ಎಂದು ತಿಳಿಸಿದರು.
ಮೇಳದಲ್ಲಿ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಎಂಜಿಎA ಪದವಿ ಕಾಲೇಜಿನ ಪ್ರಾಂಶುಪಾಲೆ ಟಿ.ಎ. ಲಿಖಿತ ಮತ್ತು ಕಾರ್ಯಕ್ರಮ ಸಂಯೋಜಕಿ ಕೆ. ಬಿಂದುಶ್ರೀ ಇದ್ದರು.