ಉಡುಪಿ, ಜೂ. ೨೩: ಮಲ್ಪೆ ಸಮುದ್ರ ತೀರದಲ್ಲಿ ಕಾಣಿಸಿಕೊಂಡ ಶ್ಯಾವಿಗೆ ರೂಪದ ಪಾಚಿ ಸೆಲೋಫೇನ್ ಟ್ಯೂಬ್ ವರ್ಮ್ ಎಂದು ವಿಜ್ಞಾನಿ ಗಳು ಪತ್ತೆ ಹಚ್ಚಿದ್ದಾರೆ. ಮೀನುಗಾರಿಕಾ ಮಹಾವಿದ್ಯಾಲಯದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಸಂಶೋಧನೆಗಾಗಿ ಪಾಚಿಯ ಸ್ಯಾಂಪಲ್ ಸಂಗ್ರಹಿಸಲಾಗಿದೆ. ಕಳೆದ ಎರಡು ದಿನಗಳಲ್ಲಿ ಮಲ್ಪೆ ಸಮುದ್ರ ತೀರದಲ್ಲಿ ಶ್ಯಾವಿಗೆ ಮಾದರಿಯ ವಿಚಿತ್ರ ವಸ್ತುಗಳು ಕಾಣಿಸಿ ಕೊಂಡಿದ್ದು, ಮೀನುಗಾರಿಕಾ ಮಹಾ ವಿದ್ಯಾಲಯದ ಪ್ರಾಧ್ಯಾಪಕ ಶಿವ ಕುಮಾರ್ ನೇತೃತ್ವದ ತಂಡ ಪರಿಶೀಲನೆ ನಡೆಸಿದೆ. ಕಿ.ಮೀ. ಗಟ್ಟಲೆ ಪಾಚಿ ಅಗಾಧವಾಗಿ ಕಂಡುಬAದಿದ್ದು, ಮೂರ್ನಾಲ್ಕು ವರ್ಷಗಳ ಹಿಂದೆ ಪಣಂಬೂರು ಬೀಚ್ನಲ್ಲಿ ಈ ರೀತಿಯ ಜೀವಿ ಪತ್ತೆಯಾಗಿತ್ತು ಎಂದು ಹೇಳಲಾಗಿದೆ. ಬಿಪರ್ ಜಾಯ್ ಚಂಡಮಾರುತದ ಪ್ರಭಾವದಿಂದಾಗಿ ಸಮುದ್ರದಲ್ಲಿ ಉಪ್ಪಿನ ಅಂಶ ಕಡಿಮೆಯಾದ ಹಿನ್ನೆಲೆ ಈ ಜೀವಿ ಸತ್ತು ರಾಶಿಯಾಗಿ ತೇಲಿ ಸಮುದ್ರ ತೀರಕ್ಕೆ ಬಂದಿದ್ದು ಯಾರೂ ಭೀತಿ ಗೊಳಗಾಗಬೇಕಾದ ಅವಶ್ಯಕತೆ ಇಲ್ಲವೆಂದು ಸಂಶೋಧಕರು ಮಾಹಿತಿ ನೀಡಿದ್ದಾರೆ.
ಜಗದೀಶ್ ಶೆಟ್ಟರ್ ಸೇರಿ ಕಾಂಗ್ರೆಸ್ನ ಮೂವರು ಅವಿರೋಧ ಆಯ್ಕೆ
ಬೆಂಗಳೂರು, ಜೂ. ೨೩: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರು ಶುಕ್ರವಾರ ಅಧಿಕೃತವಾಗಿ ಘೋಷಿಸಿದ್ದಾರೆ. ಲಕ್ಷö್ಮಣ ಸವದಿ, ಆರ್. ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯಿಂದ ತೆರವಾದ ಈ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿತ್ತು. ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯಬೇಕಿದ್ದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ ೨೦ ಕೊನೆಯ ದಿನವಾಗಿತ್ತು ಮತ್ತು ನಾಮಪತ್ರ ವಾಪಸ್ ಪಡೆಯಲು ತಾ. ೨೩ ಕೊನೆಯ ದಿನವಾಗಿತ್ತು. ಕಣದಲ್ಲಿ ಮೂವರೇ ಇದ್ದ ಕಾರಣದಿಂದ ಈ ಮೂವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಮಂಡ್ಯ, ಜೂ. ೨೩: ಗ್ರಾಮಲೆಕ್ಕಿಗನ ವರ್ಗಾವಣೆಗಾಗಿ ೪೦ ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಾಂಡವಪುರ ತಹಶೀಲ್ದಾರ್ ಕೆ.ಸಿ. ಸೌಮ್ಯ ಅವರು ಗುರುವಾರ ಸಂಜೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಾಂಡವಪುರ ತಾಲೂಕಿನಲ್ಲಿ ಗ್ರಾಮ ಲೆಕ್ಕಿಗರಾಗಿ ಕೆಲಸ ನಿರ್ವಹಿಸುತ್ತಿದ್ದ ಮರಿಸ್ವಾಮಿ ಅವರನ್ನು ಬೇರೆಡೆ ವರ್ಗಾವಣೆ ಮಾಡುವುದಕ್ಕಾಗಿ ಕೆ.ಎಸ್. ಸೌಮ್ಯ ಅವರು ೪೦ ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ನಿನ್ನೆ ಸಂಜೆ ಪಾಂಡವಪುರ ತಹಶೀಲ್ದಾರ್ ಕಚೇರಿ ಯಲ್ಲಿ ಮರಿಸ್ವಾಮಿ ಅವರಿಂದ ೪೦ ಸಾವಿರ ರೂಪಾಯಿ ಲಂಚ ಪಡೆಯು ತ್ತಿದ್ದಾಗ ತಹಶೀಲ್ದಾರ್ ಸೌಮ್ಯ ಅವರನ್ನು ಲೋಕಾಯುಕ್ತ ವಶಕ್ಕೆ ಪಡೆದಿದೆ.
ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ೧೭ ಪ್ರತಿಪಕ್ಷಗಳ ನಿರ್ಧಾರ
ಪಾಟ್ನಾ, ಜೂ. ೨೩: ೨೦೨೪ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಿನಿಂದ ಹೋರಾಡಲು ಮತ್ತು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಉತ್ಸಾಹದಿಂದ ಕೆಲಸ ಮಾಡಲು ೧೭ ವಿರೋಧ ಪಕ್ಷಗಳು ಶುಕ್ರವಾರ ನಿರ್ಧರಿಸಿವೆ. ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ಪ್ರತಿಪಕ್ಷಗಳ ಸುದೀರ್ಘ ಸಭೆಯ ನಂತರ ಜಂಟಿ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಹಾರ ಮುಖ್ಯಮಂತ್ರಿ ಹಾಗೂ ಜೆಡಿಯು ವರಿಷ್ಠ ನಿತೀಶ್ ಕುಮಾರ್ ಅವರು, ಸಭೆಯಲ್ಲಿ ೧೭ ಪಕ್ಷಗಳ ನಾಯಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ನಾಯಕರು ಒಟ್ಟಾಗಿ ಹೋರಾಡುವ ಯೋಜನೆಗೆ ಅಂತಿಮ ರೂಪ ನೀಡಲಾಗುವುದು ಎಂದು ಹೇಳಿದರು.