ಕೂಡಿಗೆ, ಜೂ. ೨೪: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ಕ್ಷೇತ್ರದ ೩೩ ನೇ ವರ್ಷದ ಪ್ರತಿಷ್ಠಾಪನಾ ಉತ್ಸವ ಕಾರ್ಯಕ್ರಮ ತಾ. ೨೮ ರಂದು ನಡೆಯಲಿದೆ.
ಬೆಳಿಗ್ಗೆ ೮ ಗಂಟೆಗೆ ಶ್ರೀ ಗಣಪತಿ ಹೋಮ, ಶ್ರೀ ಮೃತ್ಯುಂಜಯ ಹೋಮ, ಪ್ರಧಾನ ದೇವರಿಗೆ ಹಾಗೂ ಇತರೆ ಉಪ ದೇವತೆಗಳಿಗೆ ವಿಶೇಷ ಅಭಿಷೇಕ, ಅರ್ಚನೆ ಇತ್ಯಾದಿ ಪೂಜಾ ಕಾರ್ಯಕ್ರಮಗಳ ದೇವಾಲಯ ಆವರಣದಲ್ಲಿ ನಡೆಯಲಿವೆ ಎಂದು ದೇವಾಲಯ. ಸಮಿತಿಯ ಅಧ್ಯಕ್ಷ ಟಿ. ಎಂ. ಚಾಮಿ ತಿಳಿಸಿದ್ದಾರೆ