ಸೋಮವಾರಪೇಟೆ, ಜೂ. ೨೪: ಕೊಡಗು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಅವರನ್ನು ಸನ್ಮಾನಿಸಲಾಯಿತು.

ಘಟಕದ ಜಿಲ್ಲಾಧ್ಯಕ್ಷ ಬಿ.ಈ. ಜಯೇಂದ್ರ ಸೇರಿದಂತೆ ಪದಾಧಿಕಾರಿ ಗಳು ಶಾಸಕರನ್ನು ಸನ್ಮಾನಿಸಿದರು. ಈ ಸಂದರ್ಭ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್. ಮಂಜುನಾಥ್, ಕೆಪಿಸಿಸಿ ಪರಿಶಿಷ್ಟ ಜಾತಿ ಘಟಕದ ರಾಜ್ಯ ಸಮಿತಿ ಸದಸ್ಯರಾದ ಹೆಚ್.ಬಿ. ಜಯಮ್ಮ, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ತಲ್ತಾರೆ ರಾಜಪ್ಪ, ಜಿಲ್ಲಾ ಸಮಿತಿ ಸದಸ್ಯರಾದ ವೆಂಕಟೇಶ್, ಸಿಡಿಗಳಲೆ ಪುಟ್ಟಸ್ವಾಮಿ, ಬೆಟ್ಟದಳ್ಳಿ ಆನಂದ, ದೊಡ್ಡಳ್ಳಿ ಈರಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷರಾದ ನಾಗರಾಜ್ ಮತ್ತಿತರರು ಇದ್ದರು.