ಚೆಯ್ಯಂಡಾಣೆ, ಜೂ. ೨೫: ವೀರಾಜಪೇಟೆ ಸಮೀಪದ ಪೆರುಂಬಾಡಿ ಶಂಸುಲ್ ಉಲಮಾ ಮಹಿಳಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. ೮೫ ಅಂಕ ಪಡೆದ ೭ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು. ಉತ್ತಮ ಫಲಿತಾಂಶಕ್ಕೆ ಕಾರಣಕರ್ತರಾದ ಶಾಲಾ ಶಿಕ್ಷಕ ವೃಂದದವರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಸಿಪಿಎಂ ಬಷೀರ್ ಹಾಜಿ ವಹಿಸಿದರು. ಮುಖ್ಯ ಅತಿಥಿಯಾಗಿ ಕೊಡಗು ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಶಭಾನಾ ಶೇಕ್ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ಮುಖ್ಯ ಶಿಕ್ಷಕಿ ಭಾನುಮತಿ ವಿದ್ಯಾರ್ಥಿಗಳಿಗೆ ಹಿತ ನುಡಿಗಳ ನ್ನಾಡಿದರು. ಈ ಸಂದರ್ಭ ಪ್ರಮುಖರಾದ ಅಬ್ದುಲ್ ರಹ್ಮಾನ್ ಹಾಜಿ ಕುಂಜಿಲ, ಬಷೀರ್ ಹಾಜಿ ಎಡಪಾಲ, ಎಂ.ಎA. ಸುಹೈಲ್ ಕುಶಾಲನಗರ, ಮಣಿ ಮಾಸ್ಟರ್ ನೆಲ್ಲ್ಲಿಹುದಿಕೇರಿ ಉಪಸ್ಥಿತರಿದ್ದರು.