ಕುಶಾಲನಗರ, ಜೂ. ೨೪: ಅಕ್ರಮ ಗಾಂಜಾ ಮಾರಾಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಗೊಂದಿ ಬಸವನಹಳ್ಳಿಯ ನೌಶಾದ್ ( ೪೦) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಕುಶಾಲನಗರ ಪಟ್ಟಣ ಪೊಲೀಸ್ ಠಾಣಾಧಿಕಾರಿ ರವೀಂದ್ರ ನೇತೃತ್ವದಲ್ಲಿ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.