ಮಡಿಕೇರಿ, ಜೂ. ೨೪: ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಮಡಿಕೇರಿ ಕ್ಷೇತ್ರಕ್ಕೆ ಸಂಬAಧಿಸಿದ ವೈದ್ಯಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿ, ಕೊಡಗು ಜಿಲ್ಲೆಯ ವೈದ್ಯಕೀಯ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಸಚಿವರ ಸಹಕಾರ ಕೋರಿದರು.