ಕುಶಾಲನಗರ, ಜೂ. ೨೫: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಸಂದರ್ಭ ಕುಶಾಲನಗರ ಪಟ್ಟಣ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ಕುಶಾಲನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕುಶಾಲನಗರ ಪೊಲೀಸ್ ಠಾಣಾಧಿಕಾರಿ ರವೀಂದ್ರ ಮತ್ತು ಸಿಬ್ಬಂದಿ ಶನಿವಾರ ರಾತ್ರಿ ಕುಶಾಲನಗರ ಅರಣ್ಯ ತಪಾಸಣಾ ಗೇಟ್ ಬಳಿ ಗಸ್ತಿನಲ್ಲಿದ್ದ ಸಂದರ್ಭ ಗೂಡ್ಸ್ ಗಾಡಿಯೊಂದರಲ್ಲಿ ನಾಲ್ಕು ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದು ಪತ್ತೆಯಾಗಿದೆ. ಹಾರಂಗಿಯಿAದ ಹುಣಸೂರು ಕಡೆಗೆ ದನಗಳನ್ನು ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಹುಣಸೂರಿನ ನಿವಾಸಿಗಳಾದ ಮನ್ಸೂರ್, ಅಕ್ಬರ್ ಅವರುಗಳನ್ನು ಬಂಧಿಸಿ ದನಗಳನ್ನು ಸಾಗಿಸುತ್ತಿದ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ.
ನಾಲ್ಕು ದನಗಳನ್ನು ಮೈಸೂರಿನ ಪಿಂಜರ ಪೋಲ್‌ಗೆ ಸಾಗಿಸಲು ಕುಶಾಲನಗರ ಪೊಲೀಸರು ಕ್ರಮ ಕೈಗೊಂಡಿದ್ದಾರೆ.