ಕಡಂಗ, ಜೂ. ೨೪: ಬಕ್ರೀದ್ ಹಬ್ಬದ ಹಿನ್ನೆಲೆ ಗೋಣಿಕೊಪ್ಪಲು ಕೂರ್ಗ್ ಇಂಟರ್‌ನ್ಯಾಷನಲ್ ಸಭಾಂಗಣದಲ್ಲಿ ವೀರಾಜಪೇಟೆ ಡಿವೈಎಸ್‌ಪಿ ಮೋಹನ್ ಕುಮಾರ್‌ರವರ ನೇತೃತ್ವದಲ್ಲಿ ಶಾಂತಿ ಸಭೆ ನೆಡೆಸಲಾಯಿತು.

ಗೋಣಿಕೊಪ್ಪಲು ನಗರದ ಮೂರು ಮಸೀದಿಗಳ ಸಮಿತಿಯ ಪದಾಧಿಕಾರಿಗಳು ಹಾಗೂ ಇತರೆ ಸಂಘ ಸಂಸ್ಥೆಗಳ ನೇತಾರರ ಸಮುಖದಲ್ಲಿ ಶಾಂತಿ ಸಭೆ ನಡೆಯಿತು.

ಈ ಭಾಗದಲ್ಲಿ ಪರಸ್ಪರ ಪ್ರೀತಿ ಸೌಹಾರ್ದತೆಯಿಂದ ಬಾಳುತ್ತಿದ್ದೇವೆ. ಈವರೆಗೆ ಯಾವುದೇ ಹಬ್ಬದ ಸಂದರ್ಭಗಳಲ್ಲಿ ಅಹಿತಕರ ಘಟನೆಗಳು ನಡೆದಿಲ್ಲ. ಮುಂದೆಯೂ ಕೂಡ ನಾವು ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳುತ್ತೇವೆ ಎಂದು ಪ್ರಮುಖರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಡಿವೈಎಸ್ಪಿ ಮೋಹನ್ ಕುಮಾರ್ ಮಾತನಾಡಿ, ಪ್ರತೀ ವರ್ಷವೂ ಈ ಭಾಗದಲ್ಲಿ ಎಲ್ಲಾ ಧರ್ಮಗಳ ಹಬ್ಬಗಳು ಬಹಳ ಶಾಂತಿಯುತವಾಗಿ ನಡೆಯುತ್ತಿರುವುದು ಬಹಳ ಸಂತಸದ ವಿಷಯ ಮುಂದೆಯೂ ಕೂಡ ನಿಮ್ಮ ಸೌಹಾರ್ದತೆ ಕಾಪಾಡಿ ಸಮಾಜಕ್ಕೆ ಮಾದರಿಯಾಗಿರಿ ಎಂದು ಹೇಳಿದರು.

ಸಭೆಯಲ್ಲಿ ಗೋಣಿಕೊಪ್ಪಲು ಪೊಲೀಸ್ ವೃತ್ತ ನಿರೀಕ್ಷಕರಾದ ಗೋವಿಂದರಾಜು, ಗೋಣಿಕೊಪ್ಪಲು ಪೊಲೀಸ್ ಠಾಣಾಧಿಕಾರಿ ದೀಕ್ಷಿತ್ ಕುಮಾರ್, ಪೊನ್ನಂಪೇಟೆ ಠಾಣಾಧಿಕಾರಿ ಲಕ್ಷö್ಮಣ್ ಕಮಣ್ಣವರ್ ಹಾಗೂ ಕೊಡಗು ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಹಕೀಮ್ ಮತ್ತು ಹಲವು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.