ಶನಿವಾರಸಂತೆ, ಜೂ. ೨೪: ಪಟ್ಟಣದ ಪೊಲೀಸ್ ಠಾಣೆಯ ಸಭಾಂಗಣದಲ್ಲಿ ಶುಕ್ರವಾರ ಮುಂಬರುವ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ನಡೆಸಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಶನಿವಾರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯ ವೃತ್ತ ನಿರೀಕ್ಷಕ ಪರಶಿವಮೂರ್ತಿ ಮಾತನಾಡಿ, ಮುಂಬರುವ ಬಕ್ರೀದ್ ಹಬ್ಬವನ್ನು ಸೌಹಾರ್ದಯುತವಾಗಿ ಆಚರಿಸಬೇಕು. ಸಾಮೂಹಿಕ ಪ್ರಾರ್ಥನೆಯಾಗಲೀ ಯಾವುದೇ ಸಂದರ್ಭಗಳಲ್ಲಾಗಲಿ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯಿAದ ಹಬ್ಬವನ್ನಾಚರಿಸಬೇಕು ಎಂದು ತಿಳಿಸಿದರು.

ಪೊಲೀಸ್ ಸಿಬ್ಬಂದಿ, ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಮುದಾಯದ ಮುಖಂಡರು ಹಾಜರಿದ್ದರು.