ಮಡಿಕೇರಿ, ಜೂ. ೨೫ : ಪ್ರಸಕ್ತ (೨೦೨೩-೨೪) ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರು ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ (ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮಡಿಕೇರಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಸೇರ ಬಯಸುವ ಪ.ಜಾತಿ/ ಪ.ವರ್ಗದ ಹಾಗೂ ಪ್ರವರ್ಗ-೧, ೨ಎ, ೨ಬಿ, ೩ಎ, ೩ಬಿ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ೨೦೨೩-೨೪ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯದ ಮಿತಿ ಎಸ್ಸಿ ಮತ್ತು ಎಸ್ಟಿ, ಪ್ರವರ್ಗ-೧ ರೂ. ೨.೫೦ ಲಕ್ಷ ಹಾಗೂ ಪ್ರವರ್ಗ-೨ಎ, ೨ಬಿ, ೩ಎ, ೩ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. ೧ ಆಗಿದೆ.
ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ hಣಣಠಿs:/shಠಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಅರ್ಜಿಯೊಂದಿಗೆ ವಿದ್ಯಾರ್ಥಿಯ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ ಭಾವಚಿತ್ರ ಹಾಗೂ ಪೋಷಕರ ಆಧಾರ್ ಕಾರ್ಡ್ ಪ್ರತಿಯನ್ನು ಸಂಬAಧಿಸಿದ ನಿಗಮಗಳ ವಾರ್ಡನ್ರವರಿಗೆ ಸಲ್ಲಿಸಬೇಕು.
೨೦೨೩-೨೪ ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ (ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಹೊಸ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಜುಲೈ ೧೬ ಕೊನೆಯ ದಿನವಾಗಿದೆ. ಹೊಸ ಅರ್ಜಿಗಳನ್ನು ತಾಲೂಕು ಕಲ್ಯಾಣ ಅಧಿಕಾರಿಗಳು ಪರಿಶೀಲನೆ ಮಾಡಲು ಜುಲೈ ೧೯ ಕೊನೆಯ ದಿನವಾಗಿದೆ. ಕೌನ್ಸಿಲಿಂಗ್ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯು ಜುಲೈ ೨೧ ರಂದು ಪ್ರಕಟವಾಗಲಿದೆ. ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಜುಲೈ ೨೫ ಕೊನೆಯ ದಿನವಾಗಿದೆ.
ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಚೈನ್ಗೇಟ್ ಹತ್ತಿರ, ಮಡಿಕೇರಿ ದೂ.ಸಂ. ೬೩೬೩೧೨೮೯೭೫, ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ, ಎಫ್ಎಂಸಿ ಕಾಲೇಜಿನ ಹತ್ತಿರ, ಮಡಿಕೇರಿ ದೂ.ಸಂ. ೯೪೪೯೮೨೮೯೩೬. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ರಿಜ.eಜಟಿ.sತಿಜ@gmಚಿiಟ.ಛಿom ಅಥವಾ ಜಜ.eಜಟಿsತಿಜ@gmಚಿiಟ.ಛಿom ಗೆ ಇ-ಮೇಲ್ ಮಾಡುವುದು ಹಾಗೂ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು (ಗ್ರೇಡ್-೧), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿನ ಕಚೇರಿ ದೂ.ಸಂ.೯೪೮೦೮೪೩೫೫ ಮತ್ತು ಕಲ್ಯಾಣ ಮಿತ್ರ ಸಹಾಯವಾಣಿ ಸಂಖ್ಯೆ ೯೪೮೨೩೦೦೪೦೦ ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.