ಮಡಿಕೇರಿ, ಜೂ.೨೬ : ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ೧೯ನೇ ವರ್ಷದ ಪದಗ್ರಹಣ ಸಮಾರಂಭವು ಶಾಲೆಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು.
ನಿವೃತ್ತ ಪ್ರಾಂಶುಪಾಲ ಮಲ್ಚಿರ ಕೆ.ಕಾರ್ಯಪ್ಪ ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕೊಡವ ಸಮಾಜ ಹಾಗೂ ಶಾಲೆಯ ಅಧ್ಯಕ್ಷ ಮಂಡುವAಡ ಮುತ್ತಪ್ಪ ಆಯ್ಕೆಯಾದ ಶಾಲಾ ನಾಯಕರಿಗೆ ಪದಕ ಪ್ರದಾನ ಮಾಡಿದರು. ಪ್ರಾಂಶುಪಾಲರಾದ ಬಿ.ಎಂ.ಸರಸ್ವತಿ ಚಂಗಪ್ಪ ವಿದ್ಯಾರ್ಥಿ ನಾಯಕರುಗಳಿಗೆ ಪ್ರಮಾಣವಚನ ಬೋಧಿಸಿದರು.
ಶಾಲೆಯ ಕಾರ್ಯಾಧ್ಯಕ್ಷ ನಂದಿನೆರವAಡ ಚೀಯಣ್ಣ, ಸಾಹಿತ್ಯ ಸಂಘ, ಮಡಿಕೇರಿ ಕೊಡವ ಸಮಾಜದ ಜಂಟಿಕಾರ್ಯದರ್ಶಿ ನಂದಿನೆರವAಡ ದಿನೇಶ್ ವಿಜ್ಞಾನ ಸಂಘ, ನಿರ್ದೇಶಕರಾದ ಬೊಪ್ಪಂಡ ಸರಳಾ ಕರುಂಬಯ್ಯ ಕಲಾ ಸಂಘ ವನ್ನು ಹಾಗೂ ಕೊಡವ ಸಮಾಜದ ಕಾರ್ಯದರ್ಶಿ ಕನ್ನಂಡ ಸಂಪತ್ ಕುಮಾರ್ ಕ್ವಿಜ್ ಸಂಘವನ್ನು ಉದ್ಘಾಟಿಸಿದರು. ನಂತರ ೨೦೨೨-೨೩ನೇ ಸಾಲಿನ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹು ಮಾನ ವಿತರಿಸಲಾಯಿತು. ಕಾರ್ಯ ಕ್ರಮದಲ್ಲಿ ಶಾಲಾ ಅಧ್ಯಕ್ಷರು, ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.