ಮಡಿಕೇರಿ, ಜೂ. ೨೬: ಯುವ ಜನಾಂಗ ಮಾದಕ ವಸ್ತು ಸೇವನೆಯಂತಹ ದುಶ್ಚಟಗಳಿಗೆ ಬಲಿಯಾಗಿ, ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳದೆ ಭವಿಷ್ಯದ ಬಗ್ಗೆ ಚಿಂತಿಸಿ ಸಮಾಜದಲ್ಲಿ ಉತ್ತಮ ನಾಗರೀಕರಾಗಿ ಬದುಕಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಆಶಯ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಸೋಮವಾರ ನಡೆದ ‘ಅಂರ‍್ರಾಷ್ಟಿçÃಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸ್ನೇಹಿತರ ಒತ್ತಾಯ, ಗೆಳೆಯರ ಗುಂಪಿನಲ್ಲಿ ಒಂದಾಗಬೇಕು ಎಂಬ ಭಾವನೆ, ಮನೆಯ ವಾತಾವರಣ, ಹೀಗೆ ಅನೇಕ ಕಾರಣಗಳಿಗಾಗಿ ಯುವ ಜನತೆ ಮಾದಕ ವಸ್ತುಗಳ ದಾಸರಾಗುತ್ತಾರೆ. ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು. ನಾಳೆಯ ಬಗ್ಗೆ ಚಿಂತಿಸುವAತಾಗಬೇಕು. ಮಾನವನ ಜೀವನ ಅತ್ಯಂತ ಅಮೂಲ್ಯ. ಆದ್ದರಿಂದ, ಜೀವನದಲ್ಲಿ ಉತ್ತಮ ಗುರಿ ಸಾಧಿಸಲು ನಿರಂತರ ಪ್ರಯತ್ನಿಸಬೇಕು ಎಂದು ಅವರು ಸಲಹೆ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ಮಾತನಾಡಿ ಯುವಕರಲ್ಲಿ, ಮಕ್ಕಳಲ್ಲಿ, ವಯಸ್ಕರಲ್ಲಿ ಮಾದಕ ವಸ್ತು ಮತ್ತು ಮಾನವ ಕಳ್ಳಸಾಗಣಿಕೆ ಹೆಚ್ಚುತ್ತಿದ್ದು, ದೇಶದ ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ತೆಯ ಮೇಲೆ ತೀವ್ರ ದುಷ್ಪಾರಿಣಾಮ ಬೀರುತ್ತಿದೆ. ಇವುಗಳನ್ನು ಹತ್ತಿಕ್ಕುವುದು ಪ್ರತಿಯೊಬ್ಬರ ಜವಬ್ದಾರಿಯಾಗಿದೆ ಎಂದು ಹೇಳಿದರು.

ಮಾದಕ ವಸ್ತುಗಳ ವ್ಯಸನಿಗಳಾಗಿದ್ದರೆ ಶಾಲಾ ಮುಖ್ಯಸ್ಥರು ಹಾಗೂ ಪೋಷಕರಿಗೆ ತಿಳಿಸಬೇಕು. ಇಂತಹ ಮಾದಕ ವಸ್ತುಗಳ ನಿರ್ಮೂಲನೆಗಾಗಿ ಕಾನೂನು ಸೇವಾ ಪ್ರಾಧಿಕಾರ ವಿವಿಧ ಇಲಾಖೆಗಳ ಸಹಯೋಗದಿಂದ ರಾಜ್ಯ ಮಟ್ಟ, ಜಿಲ್ಲಾ ಮಟ್ಟ ಹೀಗೆ ವಿವಿಧ ಹಂತಗಳಲ್ಲಿ ಶ್ರಮಿಸುತ್ತಿದೆ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ೧೫ ಸದಸ್ಯರನ್ನು ಒಳಗೊಂಡ ವಿಶೇಷ ಕಾರ್ಯಪಡೆ ರಚನೆ ಮಾಡಲಾಗಿದ್ದು, ಈ ತಂಡವು ಜಿಲ್ಲೆಯ ಮಾದಕ ವಸ್ತುಗಳಿಗೆ ಬಲಿಯಾಗುವವರನ್ನು ರಕ್ಷಿಸಿ ಅವರ ಚಿಕಿತ್ಸೆ ಹಾಗೂ ನಂತರದ ಪುನರ್ವಸತಿಗಾಗಿ ಶ್ರಮಿಸುತ್ತಿದೆ ಎಂದು ಅವರು ಹೇಳಿದರು.

ವಕೀಲರ ಸಂಘದ ಅಧ್ಯಕ್ಷರಾದ ಎಂ.ಎ.ನಿರAಜನ್ ಮಾತನಾಡಿ, ದೇಶದಲ್ಲಿ ಯುವಕರ ಪ್ರಮಾಣ ಹೆಚ್ಚಿದೆ, ಇಂತಹ ಮಾದಕ ವಸ್ತುಗಳ ಸೇವನೆಗೆ ತುತ್ತಾದಲ್ಲಿ ದೇಶದ ಅಭಿವೃದ್ಧಿ ಕುಂಠಿತವಾಗುತ್ತದೆ. ಜನರು ಮಾದಕ ವಸ್ತು ಸೇವನೆಯಿಂದ ಅನಾರೋಗ್ಯಕ್ಕೆ ತುತ್ತಾಗಿ ಪ್ರಾಣ ಕಳೆದುಕೊಳ್ಳುತ್ತಾರೆ. ಈ ಪದಾರ್ಥಗಳನ್ನು ಬಳಸುವುದರಿಂದ ಮಾನಸಿಕ ಖಿನ್ನತೆ, ನಿದ್ರಾಹೀನತೆ ಸೇರಿದಂತೆ ಗಂಭೀರವಾದ ಮಾನಸಿಕ ತೊಂದರೆಗೆ ಒಳಗಾಗುತ್ತಾರೆ. ಆದ್ದರಿಂದ ಯುವಕರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದುಶ್ಚಟಗಳಿಂದ ದೂರವಿರುವಂತೆ ಸಲಹೆ ನೀಡಿದರು.

ಮನೋವೈದ್ಯರಾದ ಡಾ.ಡೇವಿನ್ ಲಿನೇಕರ್ ಕರ್ಕಡ ಅವರು ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಮಾತನಾಡಿ ಮಾದಕವಸ್ತುಗಳ ಚಟಕ್ಕೆ ದಾಸರಾಗಬೇಡಿ ಎಂದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ರಾಷ್ಟಿçÃಯ ಟೆಲಿ-ಮಾನಸಿಕ ಆರೋಗ್ಯ ಕಾರ್ಯಕ್ರಮದ ವತಿಯಿಂದ ಟೆಲಿ-ಮನಸ್ ಭಿತ್ತಿ ಪತ್ರ ಬಿಡುಗಡೆ ಮಾಡಲಾಯಿತು. ವ್ಯಥೆಗೆ ಒಳಪಟ್ಟವರು, ಪರೀಕ್ಷಾ ಒತ್ತಡಕ್ಕೊಳಗಾದವರು, ಕೌಟುಂಬಿಕ ಸಮಸ್ಯೆಗೊಳಗಾದವರು, ಆತ್ಮಹತ್ಯೆ ಆಲೋಚನೆಗಳು, ಮಾದಕ ವಸ್ತು ವ್ಯಸನದ ಸಮಸ್ಯೆಯಲ್ಲಿರುವವರು, ಸಂಬAಧಗಳ ಸಮಸ್ಯೆಯಲ್ಲಿ ಸಿಲುಕಿರುವವರು, ಜ್ಞಾಪಕಶಕ್ತಿ ತೊಂದರೆಯುಳ್ಳವರು, ಆರ್ಥಿಕ ಒತ್ತಡದಲ್ಲಿರುವವರು, ಇತರೆ ಯಾವುದೇ ಮಾನಸಿಕ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವವರು ಸಹಾಯವಾಣಿ ಸಂಖ್ಯೆ ೧೪೪೧೬ ಗೆ ಕರೆ ಮಾಡಿ ಸಹಾಯವನ್ನು ಪಡೆಯಬಹುದಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಕೆ.ಎಂ., ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ್, ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿ ವಿಮಲ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಗೋಪಿನಾಥ, ಹಾಗೂ ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಇತರರು ಇದ್ದರು. ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಎನ್.ಆನಂದ ಸ್ವಾಗತಿಸಿದರು. ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ನಿರೂಪಿಸಿ, ವಂದಿಸಿದರು