ಮಡಿಕೇರಿ, ಜೂ. ೨೬: ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಬೋಸರಾಜು ಅವರು ತಾ. ೨೭ ರಂದು (ಇಂದು) ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ಇAದು ಬೆಳಿಗ್ಗೆ ೮.೩೦ ಗಂಟೆಗೆ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಲಿದ್ದಾರೆ. ಬಳಿಕ ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಕೊಡಗು ಗೌಡ ಸಮಾಜದಲ್ಲಿ ನಡೆಯುವ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಬೆಳಿಗ್ಗೆ ೧೧.೩೦ ಗಂಟೆಗೆ ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯುವ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.