ಗ್ಯಾರಂಟಿಗಳ ಅನುಷ್ಠಾನಕ್ಕೆ ಯಡಿಯೂರಪ್ಪ ಪ್ರತಿಭಟನೆಗೆ ಕರೆ: ರಾಜಕೀಯ ಗಿಮ್ಮಿಕ್ ಎಂದ ಸಿದ್ದರಾಮಯ್ಯ

ಬೆಂಗಳೂರು, ಜೂ. ೨೬: ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಭರವಸೆಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಲು ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಅವರಿಗೆ ನೈತಿಕ ಹಕ್ಕಿಲ್ಲ, ಇದೊಂದು ರಾಜಕೀಯ ಗಿಮ್ಮಿಕ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಐದು ಭರವಸೆಗಳನ್ನು ಜಾರಿಗೆ ತರಲು ಈಗಾಗಲೇ ಸರ್ಕಾರ ನಿರ್ಧಾರ ಕೈಗೊಂಡಿದೆ. ಬಿಜೆಪಿ ಪಕ್ಷದ ಅಧ್ಯಕ್ಷ, ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ, ಅವರ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಜಾರಿಗೊಳಿಸಿದ್ದಾರಾ? ಇಲ್ಲ, ಹೀಗಿರುವಾಗ ಪ್ರತಿಭಟನೆಗೆ ಕರೆ ನೀಡುವುದಕ್ಕೆ ಅವರಿಗೆ ಯಾವ ನೈತಿಕ ಹಕ್ಕಿದೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ೨೦೧೩-೧೮ನೇ ಸಾಲಿನವರೆಗೆ ಅಧಿಕಾರದಲ್ಲಿದ್ದಾಗ ನೀಡಿದ್ದ ಎಲ್ಲ ಭರವಸೆಗಳನ್ನು ಈಡೇರಿಸಿದೆ. ಈ ಬಾರಿಯೂ ನೀಡಿರುವ ಎಲ್ಲಾ ಚುನಾವಣಾ ಭರವಸೆಗಳನ್ನು ಕಾರ್ಯಗತಗೊಳಿಸಲು ಈಗಾಗಲೇ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಯಡಿಯೂರಪ್ಪ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದು ಅವರು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿರುವ ಚುನಾವಣಾ ಭರವಸೆಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ವಿಧಾನಮಂಡಲದ ಅಧಿವೇಶನದ ವೇಳೆ ವಿಧಾನಸಭೆಯ ಒಳಗೆ ಮತ್ತು ಹೊರಗೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಭಾನುವಾರ ಘೋಷಿಸಿದ ಯಡಿಯೂರಪ್ಪ, ಜುಲೈ ೪ ರಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸುವುದಾಗಿ ಭಾನುವಾರ ಹೇಳಿದರು.

ನಡುರಸ್ತೆಯಲ್ಲಿ ಕಾರು ಅಡ್ಡಗಟ್ಟಿ ದರೋಡೆ: ಎಲ್‌ಜಿ ರಾಜೀನಾಮೆಗೆ ಕೇಜ್ರಿವಾಲ್ ಪಟ್ಟು

ನವದೆಹಲಿ, ಜೂ. ೨೬: ರಾಷ್ಟç ರಾಜಧಾನಿ ದೆಹಲಿಯಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿ, ಬೆದರಿಸಿ ದರೋಡೆ ಮಾಡಿರುವ ಘಟನೆ ವರದಿಯಾಗಿದೆ. ಇಂಡಿಯಾ ಗೇಟ್‌ನಿಂದ ರಿಂಗ್ ರೋಡ್‌ಗೆ ಸಂಪರ್ಕ ಕಲ್ಪಿಸುವ ಪ್ರಗತಿ ಮೈದಾನದ ಸುರಂಗ ಬೈಕ್‌ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಗನ್ ತೋರಿಸಿ ಕಾರಿನಲ್ಲಿದ್ದ ಡೆಲಿವರಿ ಏಜೆಂಟ್‌ನ ಬ್ಯಾಗ್ ದೋಚಿ ಪರಾರಿಯಾಗಿದ್ದಾರೆ. ಪಟೇಲ್ ಸಾಜನ್ ಕುಮಾರ್ ಹಣ ಕಳೆದುಕೊಂಡ ವ್ಯಕ್ತಿಯಾಗಿದ್ದು, ಅವರು ಚಾಂದಿನಿ ಚೌಕ್‌ನಲ್ಲಿರುವ ಓಮಿಯಾ ಎಂಟರ್‌ಪ್ರೆöÊಸಸ್‌ನಲ್ಲಿ ಡೆಲಿವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. ತನ್ನ ಸ್ನೇಹಿತ ಜಿಗರ್ ಪಟೇಲ್ ಜೊತೆ ಸೇರಿ ಶನಿವಾರ ಸಂಜೆ ಗುರುಗ್ರಾಮಕ್ಕೆ ೨ ಲಕ್ಷ ರೂ. ನೀಡಲು ಹೋಗುತ್ತಿದ್ದರು. ರಿಂಗ್ ರಸ್ತೆಯಿಂದ ಪ್ರಗತಿ ಮೈದಾನದ ಸುರಂಗ ಮಾರ್ಗ ಪ್ರವೇಶಿಸಿ ಸ್ವಲ್ಪ ದೂರ ಸಾಗುತ್ತಿದ್ದಾಗ ೨ ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು ಗನ್ ತೋರಿಸಿ ಬಲವಂತವಾಗಿ ಕ್ಯಾಬ್ ತಡೆದಿದ್ದಾರೆ. ಬಳಿಕ ನಗದು ತುಂಬಿದ್ದ ಬ್ಯಾಗ್ ಅನ್ನು ದೋಚಿ, ಪರಾರಿಯಾಗಿದ್ದಾರೆ. ಪಟೇಲ್ ಸಾಜನ್ ಕುಮಾರ್ ದೂರಿನ ಮೇರೆಗೆ ತಿಲಕ್ ಮಾರ್ಗ್ ಠಾಣೆ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈವರೆಗೂ ದುಷ್ಕರ್ಮಿಗಳ ಸುಳಿವು ಪತ್ತೆಯಾಗಿಲ್ಲ. ಈ ನಡುವೆ ಘಟನೆಗೆ ಕಿಡಿಕಾರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ರಾಷ್ಟç ರಾಜಧಾನಿಯಲ್ಲಿ ಅಪರಾಧ ಹೆಚ್ಚಳವಾಗಿದ್ದು, ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಮತಿಗೆಟ್ಟ ವರನಂತೆ ವರ್ತಿಸುತ್ತಿದೆ ಕಾಂಗ್ರೆಸ್ : ಹೆಚ್‌ಡಿಕೆ

ಬೆಂಗಳೂರು, ಜೂ. ೨೬: ರಾಜ್ಯ ವಿಧಾನಸಭೆ ಚುನಾವಣೆ ಸಮಯದಲ್ಲಿ ತನ್ನ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರಂಟಿಗಳು ಹಾಗೂ ದಿನ ನಿತ್ಯ ಬಳಕೆಯ ವಸ್ತು ಗಗನಕ್ಕೇರಿರುವುದರ ಸಂಬAಧ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಸಂಬAಧ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ನಾಯಕರೇ ಸುಳ್ಳು ಹೇಳಿದ್ದು ಸಾಕು, ಇನ್ನಾದರೂ ಏರಿದ ಬೆಲೆ ಕಡಿತಕ್ಕೆ ಕ್ರಮ ಕೈಗೊಳ್ಳಿ. ಇಲ್ಲವಾದರೇ ರಾಜ್ಯದ ನಾರಿಶಕ್ತಿ ಆಕ್ರೋಶಕ್ಕೆ ನೀವು ನಾಮಾವಶೇಷ ಇಲ್ಲದಂತೆ ಹೋಗುತ್ತೀರಿ. ಎಚ್ಚರ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ೫ ಗ್ಯಾರಂಟಿಗಳಿAದ ಜನೋದ್ಧಾರ ಗ್ಯಾರಂಟಿ ಎಂದು ಹಸಿ ಸುಳ್ಳು ಹೇಳಿದ್ದ ಕಾಂಗ್ರೆಸ್ ಸರ್ಕಾರ ಬರಗೆಟ್ಟ ಈ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಿಗೆಟ್ಟ ವರನಂತೆ ವರ್ತಿಸುತ್ತಿದೆ. ಬೆಲೆ ಏರಿಕೆ ಹೊಡೆತಕ್ಕೆ ಜನ ತತ್ತರಿಸುತ್ತಿರುವುದು ಅದರ ಕಣ್ಣಿಗೆ ಕಾಣುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನಗೂ ಫ್ರೀ, ನಿನಗೂ ಫ್ರೀ ಎಂದು ಗ್ಯಾರಂಟಿ ಜಾಗಟೆ ಹೊಡೆದ ಈ ಸರ್ಕಾರಕ್ಕೆ ಮಾರುಕಟ್ಟೆಯಲ್ಲಿ ಗಗನಮುಖಿಯಾದ ಆಹಾರ ಪದಾರ್ಥಗಳ ಬೆಲೆ ಮೇಲೆ ನಿಯಂತ್ರಣವೇ ಇಲ್ಲ. ಆಹಾರ ಮತ್ತು ನಾಗರಿಕ ಪೂರೈಕೆ, ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಗಳು ಜನರ ಕಣ್ಣೀರಿನಲ್ಲಿ ಗೆಣಸು ಬೇಯಿಸಿಕೊಳ್ಳುತ್ತಿವೆ. ಅವರಿಗೆ ಬೆಲೆ ಇಳಿಕೆ ಬಗ್ಗೆ ಚಿಂತನೆಯೇ ಇಲ್ಲ ಎಂದು ಕಿಡಿಕಾರಿದ್ದಾರೆ.

ಲಿವಿಂಗ್ ಟುಗೆದರ್ ವಿರುದ್ಧ ಅಲಹಾಬಾದ್ ಹೈಕೋರ್ಟ್ ತೀರ್ಪು

ಲಕ್ನೋ: ಇಸ್ಲಾಂನಲ್ಲಿ ವಿವಾಹಪೂರ್ವ ಲೈಂಗಿಕತೆ, ಚುಂಬನ, ಸ್ಪರ್ಶ ಹಾಗೂ ದಿಟ್ಟಿಸುವಿಕೆಗೆ ನಿಷೇಧ ಇದೆ ಎಂದು ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ ಮುಸ್ಲಿಂ ಜೋಡಿಯ ಲಿವಿಂಗ್ ಟುಗೆದರ್ ವಿರುದ್ಧ ಪರೋಕ್ಷವಾಗಿ ತೀರ್ಪು ನೀಡಿದೆ. ಲಿವ್ ಇನ್ ಸಂಬAಧದಲ್ಲಿರುವ ಅಂತರ್‌ಧರ್ಮೀಯ ಜೋಡಿಯೊಂದು, ತಮಗೆ ಯುವತಿಯ ಕುಟುಂಬದಿAದ ಹಾಗೂ ಪೊಲೀಸರಿಂದ ಕಿರುಕುಳವಾಗುತ್ತಿದೆ. ಹೀಗಾಗಿ ರಕ್ಷಣೆ ನೀಡಿ ಎಂದು ಹೈಕೋರ್ಟ್ ಮೊರೆ ಹೋಗಿತ್ತು. ಇದನ್ನು ವಜಾಗೊಳಿಸಿದ ಕೋರ್ಟು, ಈ ಮೇಲಿನ ಅಭಿಪ್ರಾಯ ಹೇಳಿದೆ. ಈ ಮೂಲಕ ಲಿವ್ ಇನ್ ಸಂಬAಧಕ್ಕೆ ಅಸಮ್ಮತಿ ವ್ಯಕ್ತಪಡಿಸಿದೆ. ಮದುವೆಗೆ ಮುನ್ನ ಯಾವುದೇ ಲೈಂಗಿಕ, ಕಾಮಪ್ರಚೋದಕ, ಪ್ರೀತಿಯಿಂದ ಚುಂಬಿಸುವುದು, ಸ್ಪರ್ಶಿಸುವುದು, ನೋಡುವುದು ಇತ್ಯಾದಿಗಳನ್ನು ಇಸ್ಲಾಂನಲ್ಲಿ ನಿಷೇಧಿಸಲಾಗಿದೆ ಎಂದು ಹೇಳಿದೆ.

ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ : ೧೦ ಮಂದಿ ಸಾವು

ಗಂಜಾA (ಒಡಿಶಾ), ಜೂ. ೨೬: ಒಡಿಶಾದ ಗಂಜಾAನಲ್ಲಿ ಒಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ೧೦ ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ದುರ್ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಗಂಜಾA ಜಿಲ್ಲೆಯ ದಿಗ್ಪಹಂಡಿಯ ಡೆಂಗೋಸ್ಟಾ ಪ್ರದೇಶದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಬ್ರಹ್ಮಪುರದ ಎಂಕೆಸಿಜೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ರಾಯಗಢ ಜಿಲ್ಲೆಯ ಗುಡಾರಿ ಪ್ರದೇಶದಿಂದ ಭುವನೇಶ್ವರಕ್ಕೆ ತೆರಳುತ್ತಿದ್ದ ಒಡಿಶಾ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೆರ್ಹಾಮ್‌ಪುರ ಪ್ರದೇಶದ ಖಂಡೇಲಿ ಗ್ರಾಮದಲ್ಲಿ ಮದುವೆ ಸಮಾರಂಭ ಮುಗಿಸಿ ಹಿಂದಿರುಗುತ್ತಿದ್ದ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಮೃತರೆಲ್ಲ ಖಾಸಗಿ ಬಸ್‌ನ ಪ್ರಯಾಣಿಕರಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಜಾಮ್ ಜಿಲ್ಲಾಧಿಕಾರಿ ದಿಬ್ಯಜ್ಯೋತ್ ಪರಿದಾ, ಬ್ರಹ್ಮಪುರ ಎಸ್ಪಿ ಡಾ ಶ್ರವಣ್ ವಿವೇಕ್ ಎಂ ಮತ್ತು ಬ್ರಹ್ಮಪುರ ಉಪಜಿಲ್ಲಾಧಿಕಾರಿ ಅಶುತೋಷ್ ಕುಲಕರ್ಣಿ ಅವರು ಬ್ರಹ್ಮಪುರ ಎಂಕೆಸಿಜಿ ವೈದ್ಯಕೀಯ ಕೇಂದ್ರಕ್ಕೆ ಭೇಟಿ ನೀಡಿ ಗಾಯಾಳುಗಳ ಚಿಕಿತ್ಸೆ ಮತ್ತು ಇತರ ವ್ಯವಸ್ಥೆಗಳ ಬಗ್ಗೆ ವಿಚಾರಿಸಿದರು. ಘಟನೆಯ ತನಿಖೆ ಮುಂದುವರಿದಿದೆ ಎಂದು ಬ್ರಹ್ಮಪುರದ ಪೊಲೀಸ್ ವರಿಷ್ಠಾಧಿಕಾರಿ ಡಾ.ಶ್ರವಣ್ ವಿವೇಕ್ ಎಂ. ಅವರು ಹೇಳಿದ್ದಾರೆ.