ಸಿದ್ದಾಪುರ, ಜೂ. ೨೭: ಸಿದ್ದಾಪುರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಹಾಗೂ ಗೋಮಾಂಸ ಮಾರಾಟಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಯೊಂದಿಗೆ ಸಾರ್ವಜನಿಕರು ಸಹಕರಿಸಬೇಕೆಂದು ಸಿದ್ದಾಪುರದ ನೂತನ ಠಾಣಾಧಿಕಾರಿ ರಾಘವೇಂದ್ರ ಮನವಿ ಮಾಡಿದರು.

ಸಿದ್ದಾಪುರದ ಪಂಚಾಯಿತಿ ಸಭಾಂಗಣದಲ್ಲಿ ಆಟೋ ಮಾಲೀಕರ ಹಾಗೂ ಚಾಲಕರ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದಾಪುರ ಹಾಗೂ ನೆಲ್ಲಿಹುದಿಕೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಅಕ್ರಮವಾಗಿ ಗಾಂಜಾ ಹಾಗೂ ಗೋಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಅಂತಹ ವ್ಯಕ್ತಿಗಳ ಬಗ್ಗೆ ಪೊಲೀಸ್ ಇಲಾಖೆಗೆ ಚಾಲಕರು ಮಾಹಿತಿ ನೀಡುವಂತೆ ತಿಳಿಸಿದರು. ಸಿದ್ದಾಪುರ ಹಾಗೂ ನೆಲ್ಲಿಹುದಿಕೇರಿ ಭಾಗದಲ್ಲಿ ಗಾಂಜಾ ವ್ಯಸನಿಗಳು ಹೆಚ್ಚಾಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದೆಂದರು. ವಾಹನ ಚಾಲಕರು ತಮ್ಮ ವಾಹನಗಳ ಎಲ್ಲಾ ದಾಖಲಾತಿಗಳನ್ನು ಸಮರ್ಪಕ ವಾಗಿ ಇಟ್ಟುಕೊಳ್ಳಬೇಕು. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಚಾಲಕರಿಗೆ ದಂಡ ವಿಧಿಸಲಾಗುವುದು.

ಆಟೋ ರಿಕ್ಷಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗಬಾರದು ಎಂದರು. ಇದೇ ಸಂದರ್ಭ ಆಟೋ ಚಾಲಕರು ಮಾತನಾಡಿ, ಸಿದ್ದಾಪುರ ಬಸ್ಸು ನಿಲ್ದಾಣ ಹಾಗೂ ಪಟ್ಟಣದಲ್ಲಿ ಕೆಲವು ಆಟೋ ಚಾಲಕರು ಸುತ್ತಾಡುತ್ತಾ ವಾಹನದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಾರೆ. ಇದರಿಂದ ಸರತಿ ಸಾಲಿನಲ್ಲಿ ಬಾಡಿಗೆ ಗಾಗಿ ನಿಲ್ಲುವ ಚಾಲಕರಿಗೆ ಸಮಸ್ಯೆ ಆಗುತ್ತದೆ. ಅಂತಹ ಚಾಲಕರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.

ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರುಗಳು ಇದಕ್ಕೆ ಧ್ವನಿಗೂಡಿಸಿದರು. ಈ ಸಂಬAಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಠಾಣಾಧಿಕಾರಿ

ಆಟೋ ಚಾಲಕ ಎಂ.ಎಸ್. ಹುಸೈನ್ ಮಾತನಾಡಿ, ಸಿದ್ದಾಪುರದ ಬಸ್ಸು ನಿಲ್ದಾಣದ ಹಾಲು ಡೈರಿ ಬಳಿ ವೈಟ್‌ಬೋರ್ಡಿನ ಜೀಪು ನಿಲ್ಲಿಸಿ ಪ್ರಯಾಣಿಕರನ್ನು ಕರೆದೊಯ್ಯ ಲಾಗುತ್ತಿದೆ. ಇದರಿಂದಾಗಿ ಆಟೋ ಚಾಲಕರಿಗೆ ಸಮಸ್ಯೆ ಆಗುತ್ತಿದೆ ಎಂದರು. ಇದಲ್ಲದೇ ಬಸ್ಸು ನಿಲ್ದಾಣದ ಕೆಲವು ಅಂಗಡಿ ಮಾಲೀಕರು ತಮ್ಮ ಅಂಗಡಿ ಮುಂಭಾಗದಲ್ಲಿ ವಾಹನ ಗಳನ್ನು ಬೆಳಗ್ಗಿನಿಂದ ಸಂಜೆವರೆಗೆ ನಿಲ್ಲಿಸುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದರು. ಸಿದ್ದಾಪುರದ ಆಟೋ ಮಾಲೀಕರ ಚಾಲಕರ ಸಂಘದ ಅಧ್ಯಕ್ಷ ಎಂ.ಆರ್. ಸಲೀಂ ಮಾತನಾಡಿ, ಸಿದ್ದಾಪುರದಲ್ಲಿ ಕೆಲವು ಆಟೋ ಚಾಲಕರು ಬ್ಯಾಡ್ಜ್ ಹೊಂದದೆ ಅನಧಿಕೃತವಾಗಿ ಆಟೋ ಚಾಲನೆ ಮಾಡುತ್ತಿದ್ದು, ಈ ಬಗ್ಗೆ ಹಲವಾರು ಬಾರಿ ಸಿದ್ದಾಪುರ ಠಾಣೆಗೆ ದೂರು ನೀಡಿದ್ದೇವೆ. ಆದರೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದರು.

ಆಟೋ ಚಾಲಕ ಪಿ.ಆರ್. ವಿನು ಮಾತನಾಡಿ, ನೆಲ್ಲಿಹುದಿಕೇರಿಯ ಕಾವೇರಿ ಸೇತುವೆ ಮೇಲೆ ದಿನನಿತ್ಯ ಶಾಲಾ ಮಕ್ಕಳು ಹಾಗೂ ಕೆಲ ಸಾರ್ವಜನಿಕರು ಕುಳಿತುಕೊಂಡು ಮೊಬೈಲ್‌ನಲ್ಲಿ ಚಿತ್ರ ತೆಗೆಯುತ್ತಾ ಕಾಲಹರಣ ಮಾಡುತ್ತಿರುತ್ತಾರೆ, ಈ ಬಗ್ಗೆ ಗಮನಹರಿಸಬೇಕು ಎಂದರು.

ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ರೀನಾ ತುಳಸಿ ಮಾತನಾಡಿ, ಕರಡಿಗೋಡು ರಸ್ತೆಯಲ್ಲಿ ಕೆಲವರು ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿ ಅಡ್ಡಿಪಡಿಸುತ್ತಿದ್ದಾರೆ. ಇದರ ಬಗ್ಗೆ ಕ್ರಮಕೈಗೊಳ್ಳುವಂತೆ ತಿಳಿಸಿದರು.

ಆಟೋ ಚಾಲಕರು ಮಾತನಾಡಿ, ಶಾಲೆಗಳ ಸಮೀಪ ಬ್ಯಾರಿಕೇಡ್‌ಗಳನ್ನು ಹಾಕುವಂತೆ ಸಲಹೆ ನೀಡಿದರು. ಸಭೆಯಲ್ಲಿ ಗ್ರಾ.ಪಂ. ಸದಸ್ಯರುಗಳು, ಜಿಲ್ಲಾ ವಾಣಿಜ್ಯೋದ್ಯಮಿಗಳ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್, ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು. ಗ್ರಾ.ಪಂ. ಸದಸ್ಯ ಅಬ್ದುಲ್ ಶುಕೂರ್ ಸ್ವಾಗತಿಸಿ ವಂದಿಸಿದರು.