ಸಿದ್ದಾಪುರ, ಜೂ. ೨೭ : ನೆಲ್ಲಿಹುದಿಕೇರಿ ಗ್ರಾಮದ ಕಾಫಿ ತೋಟದಲ್ಲಿ ಪತ್ತೆಯಾದ ಕಾಡಾನೆಯ ಕಳೇಬರವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ವನ್ಯಜೀವಿ ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿದರು.

ಕಳೆದ ಕೆಲವು ದಿನಗಳ ಹಿಂದೆ ಮೃತಪಟ್ಟಿರುವ ಕಾಡಾನೆಯು ಕಾಡಾನೆಗಳ ನಡುವೆ ನಡೆದ ಕಾದಾಟದಿಂದ ಮೃತಪಟ್ಟಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿ ಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಕಾಡಾನೆಯ ಮೃತದೇಹವನ್ನು ಕಾಫಿ ತೋಟ ದೊಳಗೆ ಗುಂಡಿ ತೆಗೆದು ಹೂತು ಹಾಕಲಾಯಿತು. ಸ್ಥಳಕ್ಕೆ ಎಸಿಎಫ್ ಗೋಪಾಲ್, ವಲಯ ಅರಣ್ಯ ಅಧಿಕಾರಿ ಶಿವರಾಮ್, ಉಪವಲಯ ಅರಣ್ಯ ಅಧಿಕಾರಿ ಸುಬ್ರಾಯ ಹಾಗೂ ವನ್ಯಜೀವಿ ವೈದ್ಯಾಧಿಕಾರಿ ಡಾ. ಚಿಟ್ಟಿಯಪ್ಪ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದರು.