ಸೋಮವಾರಪೇಟೆ, ಜೂ. ೨೬: ಸಮೀಪದ ಯಡೂರು ಸರ್ಕಾರಿ ಬಿಟಿಸಿಜಿ ಪ್ರಥಮ ದರ್ಜೆ ಕಾಲೇಜು ಮತ್ತು ಐಕ್ಯೂಎಸಿ ಹಾಗೂ ವಾಣಿಜ್ಯ ವಿಭಾಗದ ಸಹಯೋಗದಲ್ಲಿ ತಾ. ೨೭ರಂದು (ಇಂದು) ಕಾಲೇಜಿನ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆಯ ಬಗ್ಗೆ ರಾಜ್ಯಮಟ್ಟದ ಕಾರ್ಯಾಗಾರ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿಯ ಡಾ. ಕುಸುಮ ತಿಳಿಸಿದ್ದಾರೆ.

ಬೆಳಿಗ್ಗೆ ೯.೩೦ಕ್ಕೆ ನಡೆಯುವ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್‌ಗೌಡ, ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್, ಕಾಲೇಜಿನ ಪ್ರಾಂಶುಪಾಲರಾದ ಧನಲಕ್ಷಿö್ಮÃ ಮತ್ತಿತರರು ಉಪಸ್ಥಿತರಿರುವರು.