ವೀರಾಜಪೇಟೆ, ಜೂ. ೨೭: ಪಟ್ಟಣದ ಸೈಂಟ್ ಆ್ಯನ್ಸ್ ಪದವಿ ಕಾಲೇಜಿನ ವತಿಯಿಂದ ಜು. ೨ ರಂದು ‘ಸಿನಿಮಾ ಕಥೆ ಮತ್ತು ಚಿತ್ರಕಥೆ ಬರೆಯೋದು ಹೇಗೆ?' ಎಂಬುದರ ಕುರಿತ ಒಂದು ದಿನದ ಉಚಿತ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಕಾಲೇಜಿನ ಕನ್ನಡ ಭಾಷಾ ವಿಭಾಗದಿಂದ ಕಾಲೇಜಿನ ಸಭಾಂಗಣದಲ್ಲಿ ಜು. ೨ ರಂದು ಬೆಳಿಗ್ಗೆ ೯.೩೦ ರಿಂದ ೩.೩೦ ರವರೆಗೆ ಕಾರ್ಯಾಗಾರ ನಡೆಯಲಿದ್ದು, ಕನ್ನಡ ಸಿನಿಮಾ ನಿರ್ದೇಶಕ ಸಂತೋಷ್ ಗೋಪಾಲ್ ಕಾರ್ಯಾಗಾರವನ್ನು ನಡೆಸಿಕೊಡಲಿದ್ದಾರೆ. ನೋಂದಾಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ. ೬೩೬೧೩೪೬೫೩೦ ಹಾಗೂ ೯೭೪೦೨೮೦೧೨೦ ಅನ್ನು ಸಂಪರ್ಕಿಸುವAತೆ ಪ್ರಕಟಣೆಯಲ್ಲಿ ಕೋರಲಾಗಿದೆ.