ಮಡಿಕೇರಿ, ಜೂ. ೨೭: ಸಣ್ಣ ನೀರಾವರಿ, ವಿಜ್ಞಾನ, ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ತಲಕಾವೇರಿ ಹಾಗೂ ಭಾಗಮಂಡಲ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮೊದಲು ಭಾಗಮಂಡಲ ದಲ್ಲಿ ದೇವರ ದರ್ಶನ ಪಡೆದು ನಂತರ ತಲಕಾವೇರಿಗೆ ಆಗಮಿಸಿದರು.
ಬಳಿಕ ಮಹಾಗಣಪತಿ, ಅಗಸ್ತೆö್ಯÃಶ್ವರನಿಗೆ ಅರ್ಚನೆ ನೆರವೇರಿಸಿ ನಾಡಿನ ಹಿತ, ಜಿಲ್ಲೆಯ ಅಭಿವೃದ್ಧಿಗೆ ಸಂಕಲ್ಪ ಪೂಜೆ ಹಾಗೂ ಕುಂಕುಮಾರ್ಚನೆ ಮಾಡಿಸಿದರು. ಬ್ರಹ್ಮಕುಂಡಿಕೆಗೆ ವಿಶೇಷ ಪೂಜೆ ಸಲ್ಲಿಸಿ ನಾಡಿನ ಹಿತಕ್ಕೆ ಪ್ರಾರ್ಥಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬೋಸರಾಜು, ಪ್ರಥಮ ಬಾರಿಗೆ ಕಾವೇರಿ ಉಗಮ ಸ್ಥಾನಕ್ಕೆ ಆಗಮಿಸಿ ತಾಯಿಯ ದರ್ಶನ ಮಾಡಿದ್ದೇನೆ. ಯಾವುದೇ ಪ್ರಾಕೃತಿಕ ವಿಕೋಪ, ದುರಂತಗಳು ಸಂಭವಿಸದAತೆ, ಜನರ ಹಿತಕ್ಕಾಗಿ ಹಾಗೂ ಅಗತ್ಯ ಮಳೆಯಾಗಿ ರೈತರಿಗೆ ವರದಾನವಾಗಲಿ. ಯಾವುದೇ ಅನಾಹುತ ಸಂಭವಿಸದಿರಲಿ, ಸಮೃದ್ಧ ಬೆಳೆಯಾಗಲಿ. ಎಲ್ಲರ ಬದುಕು ಹಸನಾಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.
(ಮೊದಲ ಪುಟದಿಂದ) ಭಾಗಮಂಡಲ ಮೇಲ್ಸೇತುವೆ ಕಾಮಗಾರಿ ಅಪೂರ್ಣ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ತ್ವರಿತವಾಗಿ ಕಾಮಗಾರಿ ಮುಗಿಸಲು ಸೂಚಿಸಲಾಗುವುದು. ಈ ಬಗ್ಗೆ ಸದನದಲ್ಲಿಯೂ ಪ್ರಸ್ತಾಪಿಸಲಾಗುವುದು ಎಂದ ಅವರು, ಧಾರ್ಮಿಕ ದತ್ತಿ ಇಲಾಖೆ ಅಧೀನದ ದೇವಾಲಯಗಳಲ್ಲಿ ವ್ಯವಸ್ಥಾಪನ ಸಮಿತಿ ರಚನೆಯ ಬಗ್ಗೆ ಕ್ರಮವಹಿಸಲಾಗುತ್ತದೆ ಎಂದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಲಕಾವೇರಿಯ ಅಭಿವೃದ್ಧಿಗೆ ರೂ. ೨ ಕೋಟಿ ಅನುದಾನ ನೀಡಿದೆ. ಆದರೆ, ಅದು ವಿನಿಯೋಗ ಆಗದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ತಾಲೂಕು ಮಟ್ಟದಲ್ಲಿ ಸಭೆ
ಬಜೆಟ್ ಮಂಡನೆ ಬಳಿಕ ಜಿಲ್ಲೆಯ ೫ ತಾಲೂಕುಗಳಲ್ಲಿಯೂ ಪ್ರಗತಿ ಪರಿಶೀಲನೆ ಮಾಡಲಾಗುವುದು. ಕೊಡಗಿನ ಜನರ ಬೇಕು-ಬೇಡಿಕೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇವೆ. ಇಲ್ಲಿನ ಸಮಸ್ಯೆಯ ಪರಿಹಾರಕ್ಕೆ ಸ್ಪಂದಿಸುವ ಕೆಲಸ ನಮ್ಮಿಂದಾಗುತ್ತದೆ ಎಂದು ಭರವಸೆಯಿತ್ತರು.
ಈ ಸಂದರ್ಭ ಮಡಿಕೇರಿ ಶಾಸಕ ಡಾ. ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟ್‌ರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆಕಾಶ್, ಅಪರ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಉಪವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ತಲಕಾವೇರಿ ತಕ್ಕಮುಖ್ಯಸ್ಥ ಕೋಡಿ ಮೋಟಯ್ಯ, ಭಾಗಮಂಡಲ-ತಲಕಾವೇರಿ ದೇವಾಲಯ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಬಿದ್ದಾಟಂಡ ತಮ್ಮಯ್ಯ, ಕಾಂಗ್ರೆಸ್ ಮುಖಂಡರುಗಳಾದ ಹೆಚ್.ಎಸ್. ಚಂದ್ರಮೌಳಿ, ತೆನ್ನೀರ ಮೈನಾ ಸೇರಿದಂತೆ ಇನ್ನಿತರರು ಹಾಜರಿದ್ದರು.
ಕಾಮಗಾರಿ ಪರಿಶೀಲನೆ
ಭಾಗಮಂಡಲದಲ್ಲಿ ನಿರ್ಮಾಣ ಹಂತದಲ್ಲಿರುವ ಮೇಲ್ಸೇತುವೆ ಹಾಗೂ ಮಡಿಕೇರಿ ಜಿಲ್ಲಾಡಳಿತ ಭವನದ ಎದುರಿನ ತಡೆಗೋಡೆ ದುರಸ್ತಿ ಕಾಮಗಾರಿಯನ್ನು ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಪರಿಶೀಲನೆ ನಡೆಸಿದರು.
ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಕೆಲವೊಂದು ಕೆಲಸಗಳು ಬಾಕಿ ಇವೆ. ಇದು ಸದ್ಯದಲ್ಲಿಯೇ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ಒದಗಿಸಿದರು. ಈ ಸಂದರ್ಭ ಸ್ಥಳೀಯರು ಮಳೆಗಾಲದಲ್ಲಿ ಕಾಲ್ನಡಿಗೆಯಲ್ಲಾದರೂ ಸಂಚರಿಸಲು ಅವಕಾಶ ನೀಡುವಂತೆ ಒತ್ತಾಯಿಸಿದರು.
ಈ ಸಂಬAಧ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಡಿಕೇರಿಯ ತಡೆಗೋಡೆ ಕಾಮಗಾರಿ ವೈಜ್ಞಾನಿಕವಾಗಿ ನಡೆಸಬೇಕು. ಮುಂದೆ ಯಾವುದೇ ತಪ್ಪು ಆಗದಂತೆ ಎಚ್ಚರ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಸ್ಥಳದಲ್ಲಿದ್ದ ಅಧಿಕಾರಿ ಶೀಘ್ರದಲ್ಲಿ ಕಾಮಗಾರಿ ಮುಗಿಸಲಾಗುವುದು ಎಂದು ಸಚಿವರಿಗೆ ಮಾಹಿತಿ ಒದಗಿಸಿದರು. ಈ ಸಂದರ್ಭ ಮಡಿಕೇರಿ ಶಾಸಕ ಡಾ. ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟ್‌ರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆಕಾಶ್, ಅಪರ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಉಪವಿಭಾಗಾಧಿಕಾರಿ ಯತೀಶ್ ಉಲ್ಲಾಳ್ ಸೇರಿದಂತೆ ಇನ್ನಿತರರು ಹಾಜರಿದ್ದರು.