ಚೆಟ್ಟಳ್ಳಿ, ಜೂ. ೨೮: ಚೆಟ್ಟಳ್ಳಿ ಪ್ರೌಢಶಾಲೆಯಲ್ಲಿ ೨೦೦೦-೨೦೦೧ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ಕೊಡುಗೆಯಾಗಿ ನಿರ್ಮಿಸಿರುವ ಕುಡಿಯುವ ನೀರಿನ ಘಟಕವನ್ನು ಇತ್ತೀಚೆಗೆ ಉದ್ಘಾಟಿಸಲಾಯಿತು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಪಿ.ಪಿ. ಜಯಾನಂದ, ಸಂಚಾಲಕ ಎಂ.ಎA. ರತು ಚಂಗಪ್ಪ ಘಟಕ ಉದ್ಘಾಟಿಸಿದರು. ಇದು ೨೦೦೦-೨೦೦೧ನೇ ಸಾಲಿನ ಎಸ್.ಎಸ್.ಎಲ್.ಸಿ. ವ್ಯಾಸಂಗ ಮಾಡಿದ ವಿದ್ಯಾರ್ಥಿಗಳ ಕೊಡುಗೆಯಾಗಿದೆ. ಇತ್ತೀಚೆಗೆ ಗುರು ವಂದನಾ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ ಈ ಕಾಣಿಕೆಯನ್ನು ನೀಡಿದ್ದರು. ವಿದ್ಯಾರ್ಥಿಗಳಾದ ಹರಿದಾಸ್, ಮೇರಿ, ಶೈಲಜ ಪಾಲ್ಗೊಂಡಿದ್ದರು. ಶಾಲಾ ಆಡಳಿತ ಮಂಡಳಿಯವರು, ಶಿಕ್ಷಕ ವೃಂದದವರು ಹಾಜರಿದ್ದರು.