ಮಡಿಕೇರಿ, ಜೂ. ೨೭: ಕೊಡಗು ಪತ್ರಿಕಾ ಭವನ ಟ್ರಸ್ಟ್, ಕೊಡಗು ಪತ್ರಕರ್ತರ ಸಂಘ ಮತ್ತು ಕೊಡಗು ಸಮಾಚಾರ ಅಭಿಮಾನಿ ಬಳಗ ವತಿಯಿಂದ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ಕೊಡಗು ಸಮಾಚಾರ ವಾರಪತ್ರಿಕೆ ಸಂಪಾದಕ, ಪತ್ರಿಕಾ ಭವನ ಮ್ಯಾನೇಜಿಂಗ್ ಟ್ರಸ್ಟಿಯಾಗಿದ್ದ ದಿ. ಬಿ.ಎನ್. ಮನು ಶೆಣೈ ನೆನಪು. ಕಾರ್ಯಕ್ರಮವನ್ನು ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ. ರಮೇಶ್ ಉದ್ಘಾಟಿಸಿ ಮನುಶೆಣೈ ಅವರ ಸೇವೆಯ ಬಗ್ಗೆ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರಳೀಧರ್ ಮಾತನಾಡಿ, ಕೊಡಗು ಪತ್ರಕರ್ತರ ಸಂಘದಿAದ ಮನುಶೆಣೈ ಅವರ ಹೆಸರಿನಲ್ಲಿ ದತ್ತಿ ಪ್ರಶಸ್ತಿ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಸಮಾಜ ಸೇವಕ ವಿ.ಪಿ. ಶಶಿಧರ್, ಹಿರಿಯ ಪತ್ರಕರ್ತ ಶ್ರೀಧರ ನೆಲ್ಲಿತ್ತಾಯ, ಪತ್ರಿಕಾಭವನ ಟ್ರಸ್ಟಿ ಅನಿಲ್ ಎಚ್.ಟಿ., ಸ್ಕೌಟ್ಸ್ ಗೈಡ್ಸ್ ಆಯುಕ್ತ ಬೇಬಿ ಮ್ಯಾಥ್ಯು ವಕೀಲ ವಿದ್ಯಾಧರ್, ವೀರಾಜಪೇಟೆ ತಾಲೂಕು ಕಸಾಪ ಅಧ್ಯಕ್ಷ ರಾಜೇಶ್ ಪದ್ಮನಾಭ, ನಿವೃತ್ತ ಶಿಕ್ಷಕ ಅಬ್ದುಲ್ ಲತೀಫ್ ಅವರುಗಳು ಮನುಶೆಣೈ ಅವರನ್ನು ಸ್ಮರಿಸಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ. ಕೇಶವ ಕಾಮತ್ ಮಾತನಾಡಿ, ಜಿಲ್ಲಾ ಕ.ಸಾ.ಪ.ದಲ್ಲಿ ಮನುಶೆಣೈ ಹೆಸರಿನಲ್ಲಿ ದತ್ತಿ ಪ್ರಶಸ್ತಿ ಸ್ಥಾಪಿಸುವುದಾಗಿ ಹೇಳಿದರು. ದಿ. ಮನುಶೆಣೈ ಅವರ ಪುತ್ರ ಕಾರ್ತಿಕ್ ಶೆಣೈ ಮತ್ತು ಮಗಳು ನಮಿತಾ ಶೆಣೈ ಹಾಜರಿದ್ದರು.
ಡಿ.ಹೆಚ್. ರಜತ್ ರಾಜ್ ಪ್ರಾರ್ಥಿಸಿ, ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್ ಸ್ವಾಗತಿಸಿದರು. ಟ್ರಸ್ಟ್ನ ಖಜಾಂಚಿ ಕೆ. ತಿಮ್ಮಪ್ಪ ಕಾರ್ಯಕ್ರಮ ನಿರೂಪಿಸಿ, ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ವಂದಿಸಿದರು.