ಮಡಿಕೇರಿ, ಜೂ. ೨೭: ಬೆಂಗಳೂರು ಕಟ್ಟಿದ ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಆಡಳಿತ ವಿಶ್ವಕ್ಕೇ ಮಾದರಿಯಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಬೋಸರಾಜು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಒಕ್ಕಲಿಗರ ಸಂಘ ಮತ್ತು ಕೊಡಗು ಗೌಡ ಸಮಾಜಗಳ ಸಹಕಾರದಲ್ಲಿ ನಗರದ ಕೊಡಗು ಗೌಡ ಸಮಾಜದಲ್ಲಿ ಮಂಗಳವಾರ ನಡೆದ ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಚಿವರು ಮಾತನಾಡಿದರು.

ನಾಡಪ್ರಭು ಕೆಂಪೇಗೌಡರು ಕೆರೆ-ಕಟ್ಟೆಗಳು, ದೇವಸ್ಥಾನಗಳು, ಸ್ಮಾರಕಗಳನ್ನು ನಿರ್ಮಾಣ ಮಾಡಿ ಬೆಂಗಳೂರನ್ನು ಇಡೀ ವಿಶ್ವದಲ್ಲೇ ಮಾದರಿ ನಗರವಾಗಿ ನಿರ್ಮಿಸಿದರು. ಕೆಂಪೇಗೌಡರ ಆಡಳಿತದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಎಲ್ಲರಿಗೂ ಮಾದರಿಯಾದ ಆಡಳಿತವನ್ನು ನೀಡಿದ್ದಾರೆ. ಕೆಂಪೇಗೌಡರ ಆಡಳಿತ ಮತ್ತು ದೂರದೃಷ್ಟಿಯ ಬಗ್ಗೆ ಪ್ರತಿಯೊಬ್ಬರೂ ಅಧ್ಯಯನ ಮಾಡುವಂತಾಗಬೇಕು ಎಂದು ನುಡಿದರು.

ಬಜೆಟ್ ಅಧಿವೇಶನ ನಂತರ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಲಾಗುವುದು ಎಂದರು.

ಶಾಸಕರಾದ ಡಾ. ಮಂಥರ್‌ಗೌಡ ಮಾತನಾಡಿ, ಕನ್ನಡ ನಾಡಿಗೆ ಅದರಲ್ಲೂ ಬೆಂಗಳೂರಿಗೆ ಕೆಂಪೇಗೌಡ ಅವರು ಮಾದರಿ ಆಡಳಿತ ನೀಡಿದ್ದಾರೆ ಎಂದರಲ್ಲದೇ ಕುಶಾಲನಗರದಲ್ಲಿ ಶಿಕ್ಷಕರ ಭವನ ನಿರ್ಮಾಣಕ್ಕೆ ಜಾಗ ಒದಗಿಸಲಾಗುವುದು ಎಂದು ಇದೇ ಸಂದರ್ಭ ತಿಳಿಸಿದರು.

ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ಆದರ್ಶ ಆಡಳಿತಗಾರ ಕೆಂಪೇಗೌಡರ ಮಾದರಿ ಆಡಳಿತ ಬಗ್ಗೆ ಪ್ರತಿಯೊಬ್ಬರೂ ಅಧ್ಯಯನ ಮಾಡುವಂತಾಗಬೇಕು ಎಂದರು.

ಜಿಲ್ಲಾಧಿಕಾರಿ ವೆಂಕಟ್ ರಾಜ ಮಾತನಾಡಿ, ಕೆಂಪೇಗೌಡರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಅವರ ಅಧಿಕಾರ ಅವಧಿಯಲ್ಲಿನ ಕೆಲಸಗಳನ್ನು ಸದಾ ಸ್ಮರಿಸಬೇಕು ಎಂದರು.

ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್.ಎನ್.ಚಂಗಪ್ಪ ಮಾತ ನಾಡಿ, ಬೆಂಗಳೂರಿನ ಒಂದೊAದು ಬಡಾವಣೆಗೂ ಒಂದೊAದು ಹೆಸರು ಇಟ್ಟು ಬೆಂಗಳೂರು ಅಭಿವೃದ್ಧಿಗೆ ಕೆಂಪೇಗೌಡರು ಶ್ರಮಿಸಿದ್ದಾರೆ ಎಂದರು.

ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಮಾತನಾಡಿ, ಒತ್ತುವರಿ ಯಾಗಿರುವ ಕೆರೆ ಕಟ್ಟೆಗಳು, ರಾಜ ಕಾಲುವೆಗಳನ್ನು ತೆರವು ಗೊಳಿಸಬೇಕು. ಇದರಿಂದ ಸುಗಮ ಸಂಚಾರ ಹಾಗೂ ಕೆರೆ ಕಟ್ಟೆಗಳ ಉಳಿವಿಗೆ ಸಹಕಾರಿ ಯಾಗಲಿದೆ ಎಂದು ಹೇಳಿದರು.

ವಕೀಲರಾದ ಕೆ.ಆರ್.ವಿದ್ಯಾಧರ ಮಾತನಾಡಿ, ಕೆಂಪೇಗೌಡರು ವಿಜಯ ನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನವರಾಗಿದ್ದರು. ಹಂಪಿಯ ವೈಭವವನ್ನು ಕಂಡು ದೂರದೃಷ್ಟಿ ಯಿಂದ ಬೆಂಗಳೂರನ್ನು ನಿರ್ಮಾಣ ಮಾಡಿದರು ಎಂದರು.

ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಮಡಿಕೇರಿ ಗೌಡ ಸಮಾಜದ ಅಧ್ಯಕ್ಷರಾದ ಪೇರಿಯನ ಜಯಾನಂದ, ಜಿ.ಪಂ. ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಹೈಕೋರ್ಟ್ ವಕೀಲರಾದ ಎಚ್.ಎಸ್.ಚಂದ್ರಮೌಳಿ, ಒಕ್ಕಲಿಗ ಸಮಾಜದ ಸೋಮವಾರ ಪೇಟೆ ತಾಲೂಕು ಅಧ್ಯಕ್ಷ ಎ.ಆರ್.ಮುತ್ತಣ್ಣ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ ರಾಜ್ ಇತರರು ಇದ್ದರು.

ಕೊಡಗು ಗೌಡ ಮಹಿಳಾ ಒಕ್ಕೂಟದವರು ನಾಡಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಸ್ವಾಗತಿಸಿದರು. ಶಿಕ್ಷಕರಾದ ಕುಮಾರ ನಿರೂಪಿಸಿದರು. ಮಣಜೂರು ಮಂಜುನಾಥ್ ವಂದಿಸಿದರು.