ನಾಪೋಕ್ಲು, ಜೂ. ೨೮: ಸ್ಥಳೀಯ ಪೊಲೀಸ್ ಠಾಣೆ ವತಿಯಿಂದ ಅಂರ‍್ರಾಷ್ಟಿçÃಯ ಮಾದಕ ದ್ರವ್ಯ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಶಾಲಾ ಕಾಲೇಜು ಸಹಯೋಗದೊಂದಿಗೆ ಜನಜಾಗೃತಿ ಜಾಥಾ ನಡೆಯಿತು. ಈ ಸಂದರ್ಭ ಸ್ಥಳೀಯ ಸರ್ಕಾರಿ ಪದವಿ ಕಾಲೇಜು ಹಾಗೂ ಕೆಪಿಎಸ್ ಪ್ರೌಢ ಹಾಗೂ ಕಾಲೇಜು ವಿದ್ಯಾರ್ಥಿಗಳು, ಬೋಧಕರು ಮತ್ತು ಪೊಲೀಸರು ಪಟ್ಟಣದ ಮುಖ್ಯ ಬೀದಿಯಲ್ಲಿ ಜಾಥಾ ನಡೆಸಿ ಘೋಷಣೆಗಳನ್ನು ಕೂಗಿ ಮಾದಕ ದ್ರವ್ಯದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದರು. ಠಾಣಾಧಿಕಾರಿ ಮಂಜುನಾಥ್ ಮಾತನಾಡಿ, ೨೦೨೨ರ ಆರೋಗ್ಯ ಇಲಾಖೆ ವರದಿ ಅನ್ವಯ ಜನಸಂಖ್ಯೆ ಶೇ. ೪೦ರಷ್ಟು ಮಂದಿ ಮಾದಕ ವ್ಯಸನಕ್ಕೆ ದಾಸರಾಗಿದ್ದಾರೆ. ಸ್ಥಳೀಯವಾಗಿ ಮಾದಕ ವ್ಯಸನ ಮಾರಾಟ ತಡೆಗೆ ಸ್ಥಳೀಯರು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ಜಾಥಾ ಸಂದರ್ಭ ಸರ್ಕಾರಿ ಪದವಿ ಕಾಲೇಜು ಪ್ರಾಂಶುಪಾಲೆ ಡಾ. ಕಾವೇರಿ ಮಾತನಾಡಿ, ೧೮ ರಿಂದ ೨೨ ವರ್ಷದ ಹದಿಹರೆಯದ ಯುವ ಪೀಳಿಗೆ ವಿವಿಧ ಮಾದಕ ವಸ್ತುಗಳ ಬಳಕೆ ಮಾಡುವುದರ ಮೂಲಕ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಅರಿವು ಮೂಡಿಸುವ ಕೆಲಸ ನಮ್ಮೆಲ್ಲರಗಿದ್ದು ಸಮಾಜದ ಸ್ವಾಸ್ಥö್ಯ ಕಾಪಾಡಬೇಕಾಗಿದೆ ಎಂದರು. ಜಾಥಾದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಕೆಪಿಎಸ್ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳು ಶಿಕ್ಷಕರು. ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಬೋಧಕ ವರ್ಗದವರು ಭಾಗವಹಿಸಿದ್ದರು.