ಕೂಡಿಗೆ, ಜೂ. ೨೭: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದ ಗುತ್ತಿಗೆದಾರ ಎಚ್.ಎಚ್.ಕೃಷ್ಣ ಅವರು ಜೇನುಕಲ್ಲು ಬೆಟ್ಟದ ಹಿರಿಯ ಪ್ರಾಥಮಿಕ ಶಾಲೆಯ ೩೦ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಒಂದು ವರ್ಷಕ್ಕೆ ಬೇಕಾಗುವ ನೋಟ್ ಪುಸ್ತಕ, ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡಿದ್ದಾರೆ. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕ ರಾಮೇಗೌಡ, ಸಹ ಶಿಕ್ಷಕರ ವೃಂದದವರು ಇದ್ದರು.