ಶನಿವಾರಸಂತೆ, ಜೂ. ೨೭: ಸಮೀಪದ ಕೊಡ್ಲಿಪೇಟೆಯ ಶ್ರೀರಾಮಲಿಂಗೇಶ್ವರ ಚೌಡೇಶ್ವರಿ ದೇವಸ್ಥಾನದಲ್ಲಿ ಆಷಾಡ ಶುಕ್ರವಾರದ ಪ್ರಯುಕ್ತ ದೇವಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.

ದೇವಸ್ಥಾನ ಪ್ರಧಾನ ಅರ್ಚಕ ಮಹಾಬಲ ಜೋಷಿ ಪೂಜಾ ಕೈಂಕರ್ಯ ನೆರವೇರಿಸಿದರು. ನೂರಾರು ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡಿದ್ದು ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.