ಮಡಿಕೇರಿ, ಜೂ. ೨೯ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ವೀರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಮಾಹಿತಿಯನ್ವಯ ದಾಳಿ ನಡೆಸಿದ ಪೊಲೀಸರು ವೀರಾಜಪೇಟೆ ಸುಂಕದಕಟ್ಟೆ ನಿವಾಸಿಗಳಾದ ಎಸ್. ಹರೀಶ್ (೪೮), ಎಸ್. ಸಂತೋಷ್ (೩೯), ಎಸ್.ಪಿ. ದೀಕ್ಷಿತ್ (೨೩) ಎಂಬವರುಗಳನ್ನು ಬಂಧಿಸಿ ೧೨೭ ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಎಸ್ಪಿ ಕೆ. ರಾಮರಾಜನ್ ಮಾರ್ಗದರ್ಶನದಲ್ಲಿ ವೀರಾಜಪೇಟೆ ಡಿವೈಎಸ್ಪಿ ಆರ್. ಮೋಹನ್‌ಕುಮಾರ್, ವೃತ್ತ ನಿರೀಕ್ಷಕ ಬಿ.ಎಸ್. ಶಿವರುದ್ರ, ಠಾಣಾಧಿಕಾರಿ ಸಿ.ವಿ. ಶ್ರೀಧರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.