ಕೂಡಿಗೆ, ಜೂ. ೨೯: ಕುಶಾಲನಗರ ಗ್ರಾಮಾಂತರ ಪೋಲೀಸ್ ಠಾಣೆಯ ವತಿಯಿಂದ ಅಂರ‍್ರಾಷ್ಟಿçÃಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಕಾರ್ಯಕ್ರಮ ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಠಾಣಾಧಿಕಾರಿ ಭಾರತಿಯವರು ಚಾಲನೆ ನೀಡಿ ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಬಸಪ್ಪ ವಹಿಸಿದ್ದರು. ವೇದಿಕೆಯಲ್ಲಿ ಸಹಾಯಕ ಠಾಣಾಧಿಕಾರಿ ಕುಮಾರಿ, ಪೊಲೀಸ್ ಸಿಬ್ಬಂದಿಗಳಾದ ಹೆಚ್.ಸಿ., ಮಂಜುನಾಥ, ತೇಜಸ್ವಿನಿ ಕಾಲೇಜಿನ ಉಪನ್ಯಾಸಕರಾದ ನಾಗಪ್ಪ ಯಾಲಕಿಕಟ್ಟೆ, ಕಾವೇರಮ್ಮ, ಸತೀಶ್, ರಮೇಶ್, ಹನುಮರಾಜ್ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.