ಕೂಡಿಗೆ, ಜೂ. ೨೯: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಸಿಕ ಸಭೆಯು ಅಧ್ಯಕ್ಷೆ ಇಂದಿರಾ ರಮೇಶ್ ಅಧ್ಯಕ್ಷತೆಯಲ್ಲಿ ಜರುಗಿತು.
ಸಭೆಯಲ್ಲಿ ಹಾಜರಿದ್ದ ಸರ್ವ ಸದಸ್ಯರು ಈಗಿರುವ ಗ್ರಾಮ ಪಂಚಾಯಿತಿ ಕಟ್ಟಡವು ರಾಜ್ಯ ಹೆದ್ದಾರಿಗೆ ಹೊಂದಿಕೊAಡAತೆ ಇರುವುದರಿಂದಾಗಿ ರಾಷ್ಟಿçÃಯ ಹೆದ್ದಾರಿಯ ರಸ್ತೆ ಅಗಲೀಕರಣದ ಸರ್ವೆ ಕಾರ್ಯ ನಡೆದಿರುವ ಹಿನ್ನೆಲೆ ಕೂಡಿಗೆ ಕೃಷಿ ಕ್ಷೇತ್ರದ ಆವರಣದಲ್ಲಿ ಕಟ್ಟಡ ನಿರ್ಮಾಣಕ್ಕೆ ಜಾಗವನ್ನು ಕಾಯ್ದಿರಿಸುವ ಸಲುವಾಗಿ ಸಂಬAಧಿಸಿದ ಇಲಾಖೆಯೊಂದಿಗೆ ಪತ್ರ ವ್ಯವಹಾರ ಮಾಡುವಂತೆ ನಿರ್ಧರಿಸಲಾಯಿತು.
ಅಲ್ಲದೆ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಬಗ್ಗೆ ಜನರಲ್ಲಿ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆ ಡೆಂಗ್ಯೂ ಜ್ವರ ಹರಡದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಭೆಯಲ್ಲಿ ಚರ್ಚಿಸಲಾಯಿತು. ಈಗಾಗಲೇ ಡೆಂಗ್ಯೂ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದರ ಜೊತೆಗೆ ಗ್ರಾಮ ಪಂಚಾಯಿತಿಯ ಎಲ್ಲಾ ವಾರ್ಡ್ನಲ್ಲಿಯೂ ರಾಸಾಯನಿಕ ಹೊಗೆಯನ್ನು ಸಿಂಪಡಿಸುವAತೆ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಾಂಗದವರಿಗೆ ಶೇ. ೨೫ರ ನಿಧಿಯಲ್ಲಿ ನೀಡುವ ಅಂತ್ಯ ಸಂಸ್ಕಾರದ ಹಣವನ್ನು, ಒಂದು ತಿಂಗಳ ಒಳಗಾಗಿ ಅರ್ಜಿ ನೀಡುವವರಿಗೆ ಮಾತ್ರ ಹಣ ನೀಡುವಂತೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸ್ವಚ್ಛತಾ ಸಿಬ್ಬಂದಿಗಳನ್ನು ಆಯಾ ದಿನದಂದು ನಿಗಪಡಿಸಿದ ವಾರ್ಡ್ನಲ್ಲಿ ಕೆಲಸ ನಿರ್ವಹಿಸಲು ಬಿಡಬೇಕು. ಅವರನ್ನು ಬೇರೆ ಕೆಲಸಗಳಿಗೆ ಬಳಸದಂತೆ ಸ್ವಚ್ಛತೆಗೆ ಹೆಚ್ಚಿನ ಅಧ್ಯತೆಯನ್ನು ನೀಡುವಂತೆ ಸದಸ್ಯರು ಒತ್ತಾಯಿಸಿದರು.
ಕೋಳಿ ಮಾಂಸದ ತ್ಯಾಜ್ಯಗಳನ್ನು ಆನೆಕೆರೆ ಬಳಿ ಎಸೆಯಲಾಗುತ್ತಿದ್ದು, ಇದರಿಂದ ಸ್ಥಳೀಯರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸದಸ್ಯರಾದ ದಿನೇಶ್, ಮಂಜುನಾಥ ಫಿಲೋಮಿನಾ, ಷಂಶುದ್ದೀನ್ ಗಮನ ಸೆಳೆದರು. ಸಭೆಯಲ್ಲಿ ಅಭಿವೃದ್ಧಿ ಅಧಿಕಾರಿ ಸರಕಾರದ ವಿವಿಧ ಯೋಜನೆಗಳ ಬಗ್ಗೆ ಸಮರ್ಪಕವಾದ ಮಾಹಿತಿಯನ್ನು ನೀಡಿದರು. ಸಾರ್ವಜನಿಕರಿಂದ ಬಂದ ಅರ್ಜಿಗಳ ವಿಲೇವಾರಿ ಮಾಡುವ ಬಗ್ಗೆ ಸಭೆಗೆ ತಿಳಿಸಿದರು.
ಈ ಸಂದರ್ಭ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಾಸ್ಕರ್ ನಾಯಕ್, ಸೇರಿದಂತೆ ಸರ್ವ ಸದಸ್ಯರು ಹಾಜರಿದ್ದರು.