ಕೂಡಿಗೆ, ಜೂ. ೩೦: ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ದೂರದೃಷ್ಟಿ ಯೋಜನೆ, ಹಣಕಾಸು ಯೋಜನೆ ಹಾಗೂ ಲೆಕ್ಕಪರಿಶೋಧನೆಯ ಸಭೆಯು ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಅಭಿವೃದ್ಧಿ ಅಧಿಕಾರಿ ಸಂತೋಷ್ ದೂರದೃಷ್ಟಿ ಯೋಜನೆಯ ಅಡಿಯಲ್ಲಿ ಈಗಾಗಲೇ ಸಂಗ್ರಹಿಸಿರುವ ಸರ್ವೆ ದತ್ತಾಂಶಗಳನ್ನು ಸಭೆಗೆ ತಿಳಿಸಿ, ವಿವಿಧ ಹಂತಗಳಲ್ಲಿ ಅಭಿವೃದ್ಧಿಗೆ ಸಂಬAಧಿಸಿದ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಹಣಕಾಸನ್ನು ಹೊಂದಿಸುವ ಬಗ್ಗೆ ಸಭೆಯಲ್ಲಿ ಸವಿಸ್ತಾರವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ಹಾಜರಿದ್ದ ಸದಸ್ಯರು ತಮ್ಮ ತಮ್ಮ ವಾರ್ಡ್ನ ಶಿಕ್ಷಣ ಆರೋಗ್ಯ ನೈರ್ಮಲ್ಯ ಹಾಗೂ ಮೂಲಭೂತ ಸೌಕರ್ಯಕ್ಕೆ ಸಂಬAಧಿಸಿದ ವಿವಿಧ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ತಯಾರಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಸಭೆಯಲ್ಲಿ ಉಪಾಧ್ಯಕ್ಷ ಭಾಸ್ಕರ್ ನಾಯಕ್ ಸೇರಿದಂತೆ ಸರ್ವ ಸದಸ್ಯರು ಹಾಜರಿದ್ದರು.