ವೀರಾಜಪೇಟೆ, ಜೂ. ೨೯: ಕೊಡಗು ದಂತ ವೈದ್ಯಕೀಯ ಮಹಾ ವಿದ್ಯಾಲಯದ ವತಿಯಿಂದ ವೀರಾಜಪೇಟೆ ರೋಟರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ದಂತ ಚಿಕಿತ್ಸಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವೈದ್ಯಕೀಯ ವಲಯದಿಂದ ವಿದ್ಯಾರ್ಥಿಗಳಿಗೆ ಹಲ್ಲಿನ ಮಹತ್ವ ಹಾಗೂ ಹಲ್ಲುಗಳನ್ನು ಯಾವ ರೀತಿಯಲ್ಲಿ ಪೋಷಣೆ ಮಾಡಬೇಕು ಎಂಬವುದರ ಕುರಿತು ಜಾಗೃತಿ ಮಾಡಿಸಲಾಯಿತು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ವಿಶಾಲಾಕ್ಷಿ, ಶಿಕ್ಷಕ ವೃಂದ ಹಾಗೂ ವೈದ್ಯಕೀಯ ತಂಡದವರು ಉಪಸ್ಥಿತರಿದ್ದರು.