ಸೋಮವಾರಪೇಟೆ, ಜೂ. ೩೦: ಮಾನವತಾವಾದಿಯಾಗಿದ್ದ ನಾಡಪ್ರಭು ಕೆಂಪೇಗೌಡರು ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎನ್ನುವ ಆದರ್ಶ ಹೊಂದಿದ್ದರು. ಅವರ ಆದರ್ಶ ಸಾರ್ವ ಕಾಲಿಕ ಎಂದು ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್ ಅಭಿಪ್ರಾಯಿಸಿದರು.
ತಾಲೂಕು ಆಡಳಿತದ ವತಿಯಿಂದ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲ್ಲಿ ಭಾಗವಹಿಸಿ ಅವರು ಮಾತನಾಡಿದರು. ೧೫೩೭ರಲ್ಲಿ ಕೆಂಪೇಗೌಡರ ಯತ್ನದಿಂದ ಬೆಂಗಳೂರು ರೂಪ ತಳೆಯಿತು. ಅವರು ಸಾಕಷ್ಟು ಕೆರೆಗಳನ್ನು ಕಟ್ಟಿಸಿದರು. ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದರು. ಯಲಹಂಕ ನಾಡ ಪ್ರಭುಗಳಾಗಿ ೪೬ ವರ್ಷಗಳ ಕಾಲ ಆಡಳಿತ ನಡೆಸಿ, ನಂತರ ಯಲಹಂಕ ತೊರೆದು ಬೆಂಗಳೂರು ಕೋಟೆಯನ್ನು ನಿರ್ಮಿಸಿದರು. ಬೆಂಗಳೂರು ಪೇಟೆ ಪ್ರಸ್ತುತ ಬೆಂಗಳೂರು ನಗರವಾಗಿದ್ದು, ಪ್ರಪಂಚವನ್ನೇ ತನ್ನತ್ತ ಸೆಳೆಯುತ್ತಿರುವ ನಗರಗಳಲ್ಲಿ ಅಗ್ರಗಣ್ಯವಾಗಿದೆ ಎಂದು ವರ್ಣಿಸಿದರು. ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಜನೋಪಯೋಗಿ ಕಾರ್ಯಗಳ ಬಗ್ಗೆ ಸ್ಮರಿಸಲಾಯಿತು. ಈ ಸಂದರ್ಭ ಪಟ್ಟಣ ಪಂಚಾಯಿತಿ ಸದಸ್ಯರಾದ ಪಿ.ಕೆ. ಚಂದ್ರು, ಶಿರಸ್ತೇದಾರ್ ಲೋಹಿತ್ ಕುಮಾರ್, ಉಮೇಶ್ ಇದ್ದರು.