ಮಡಿಕೇರಿ, ಜೂ. ೩೦: ಕೊಡಗು ಜಿಲ್ಲೆಯ ಅಭಿವೃದ್ಧಿ ದೃಷ್ಟಿಕೋನದಲ್ಲಿ ಬಜೆಟ್ ಮಂಡನೆಯಲ್ಲಿ ವಿಶೇಷ ಅನುದಾನ ನೀಡುವ ನಿರೀಕ್ಷೆ ಇದೆ ಎಂದು ಶಾಸಕ ಡಾ. ಮಂಥರ್ ಗೌಡ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆ, ರಸ್ತೆ, ಮೂಲಭೂತ ಸೌಕರ್ಯಕ್ಕೆ ಬಜೆಟ್‌ನಲ್ಲಿ ವಿಶೇಷ ಅನುದಾನ ನೀಡಲು ಮನವಿ ಮಾಡಿದ್ದೇವೆ. ಆದ್ಯತೆ ಮೇರೆ ಜಿಲ್ಲೆಗೆ ಅನುದಾನ ನೀಡುವ ನಿರೀಕ್ಷೆ ಹೊಂದಿದ್ದೇನೆ. ಜಿಲ್ಲಾಸ್ಪತ್ರೆ ಮೇಲ್ದರ್ಜೆಗೆ ಸಂಬAಧಿಸಿದAತೆ ಈಗಾಗಲೇ ಕೆಲಸಗಳು ನಡೆಯುತ್ತಿವೆ.
(ಮೊದಲ ಪುಟದಿಂದ) ಇದಕ್ಕೆ ರೂ. ೭೫ ರಿಂದ ೮೦ ಕೋಟಿ ಅನುದಾನ ಮೀಸಲಿಡುವ ಸಾಧ್ಯತೆ ಇದೆ ಎಂದರು. ಪ್ರವಾಸೋದ್ಯಮ ಬೆಳವಣಿಗೆಗೆ ಪೂರಕ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು. ಈ ಸಂಬAಧ ಸಚಿವ ಹೆಚ್.ಕೆ. ಪಾಟೀಲ್ ಅವರೊಂದಿಗೆ ಸಮಾಲೋಚಿಸಲಾಗಿದೆ. ಸೋಮವಾರಪೇಟೆ ಟರ್ಫ್ ಮೈದಾನ ಕಾಮಗಾರಿ ಶೀಘ್ರ ಮುಗಿಸಿ ಕ್ರೀಡಾಪಟುಗಳ ಉಪಯೋಗಕ್ಕೆ ಅನುವು ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು.