ಕೂಡಿಗೆ, ಜೂ. ೩೦: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಳ್ಳಿ ಮತ್ತು ಮಲ್ಲೇನಹಳ್ಳಿ ಗ್ರಾಮದ ಸರ್ವೆ ನಂಬರ್ ೫೧ರ ೦.೫೦ ಎಕರೆ ಜಾಗವನ್ನು ಜಿಲ್ಲಾಧಿಕಾರಿಗಳ ಆದೇಶ ಸಂ/ಜಾಗ(೫)೭/೨೦೨೩-೨೪ ರಂತೆ ಸಾರ್ವಜನಿಕ ಸ್ಮಶಾನ ಜಾಗವನ್ನು ಹೆಗ್ಗಡಳ್ಳಿ ಗ್ರಾಮಸ್ಥರಿಗೆ ಕಾಯ್ದಿರಿಸಿದ್ದು ಇದರ ಗುರುತು ಪತ್ರವನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಂಜನಾದೇವಿ ಅವರಿಗೆ ಕಂದಾಯ ಇಲಾಖೆಯ ಅಧಿಕಾರಿಗಳು ಹಸ್ತಾಂತರಿಸಿದರು.

ಈ ಸಂದರ್ಭ ಕುಶಾಲನಗರ ಹೋಬಳಿ ಉಪ ತಹಶೀಲ್ದಾರ್ ಮಧುಸೂದನ್, ಕಂದಾಯ ಪರಿವೀಕ್ಷಕ ಸಂತೋಷ್, ಕೂಡಿಗೆ ಗ್ರಾಮ ಆಡಳಿತ ಅಧಿಕಾರಿ ಗುರುದರ್ಶನ್, ಕೂಡಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಂಜನಾದೇವಿ ಹಾಗೂ ಗ್ರಾಮಸ್ಥರು ಹಾಜರಿದ್ದರು.