ಸಿದ್ದಾಪುರ, ಜೂ. ೩೦: ವೀರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಹಾಲುಗುಂದ, ಬೈರಂಬಾಡ, ಯಡೂರು, ಹಚ್ಚಿನಾಡು, ಕಣ್ಣಂಗಾಲ, ಇಂಜಲಗೆರೆ, ಪುಲಿಯೇರಿ, ಕುಂಬೇರಿ ಕಾರ್ಮಾಡು ಗ್ರಾಮಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ಜುಲೈ ೧ ರಂದು (ಇಂದು) ಹಮ್ಮಿಕೊಂಡಿರುವ ಹಿನ್ನೆಲೆ ಈ ವ್ಯಾಪ್ತಿಯ ಸಾರ್ವಜನಿಕರು ಹಾಗೂ ಶಾಲಾ ವಿದ್ಯಾರ್ಥಿಗಳು ಎಚ್ಚರವಹಿಸಬೇಕು ಹಾಗೂ ಕಾರ್ಯಾಚರಣೆಗೆ ಇಲಾಖೆಯೊಂದಿಗೆ ಸಹಕರಿಸಬೇಕೆಂದು ವಲಯ ಅರಣ್ಯಾಧಿಕಾರಿ ಕೆ.ಎಂ. ದೇವಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.