ಸೋಮವಾರಪೇಟೆ, ಜೂ. ೩೦: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಲೇಜುಗಳ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಆದ್ಯತೆ ನೀಡಲಾಗುವುದು ಎಂದು ಶಾಸಕ ಮಂಥರ್ ಗೌಡ ಹೇಳಿದರು.

ಸಮೀಪದ ಯಡೂರು ಬಿ.ಟಿ.ಸಿ.ಜಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ರಾಜ್ಯಮಟ್ಟದ ಅಂತರ ಕಾಲೇಜು ನೃತ್ಯ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವಿಕೆ ಅತಿ ಮುಖ್ಯ, ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದ ಅವರು, ಮುಂದಿನ ದಿನಗಳಲ್ಲಿ ಕಾಲೇಜು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕ್ಷೇತ್ರ ವ್ಯಾಪ್ತಿಯ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಕಾಲೇಜು ಆಡಳಿತ ಮಂಡಳಿ ವತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಎಂ. ಲತೀಫ್, ಕಾಲೇಜು ಪ್ರಾಂಶುಪಾಲೆ ಧನಲಕ್ಷಿö್ಮ ಹಾಗೂ ಕಾಲೇಜು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.