ಸೋಮವಾರಪೇಟೆ, ಜೂ. ೩೦: ಸಾಮಾಜಿಕ ಪಿಡುಗಾಗಿರುವ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾರ್ವಜನಿಕರು ಸಹಕಾರ ನೀಡಬೇಕೆಂದು ಇಲ್ಲಿನ ಸಿವಿಲ್ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಗೋಕುಲ್ ಹೇಳಿದರು.

ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತದ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಂರ‍್ರಾಷ್ಟಿçÃಯ ಬಾಲಕಾರ್ಮಿಕ ಪದ್ಧತಿ ನಿಷೇಧ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಾಲ ಕಾರ್ಮಿಕ ಪದ್ಧತಿಗೆ ಕಾನೂನಿನಲ್ಲಿ ಅವಕಾಶವಿಲ್ಲ. ಬಾಲಕಾರ್ಮಿಕರು ಕಂಡುಬAದರೆ ಸಂಬAಧಿಸಿದ ಇಲಾಖೆಗೆ ಮಾಹಿತಿ ನೀಡಬೇಕು. ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದೂ ಅಪರಾಧವಾಗಿದೆ. ಈ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾರ್ವಜನಿಕರ ಸಹಕಾರ ಅಗತ್ಯ ಎಂದರು.

ಈ ಸಂದರ್ಭ ಬಾಲ ನ್ಯಾಯ ಮಂಡಳಿ ಹಾಗೂ ಬಾಲಾಪರಾಧಿಗಳು, ಬಾಲ ಕಾರ್ಮಿಕ ಪದ್ಧತಿ ತಡೆ ವಿಚಾರವಾಗಿ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಕೀಲರ ಸಂಘದ ಅಧ್ಯಕ್ಷ ಕಾಟ್ನಮನೆ ವಿಠಲ್‌ಗೌಡ ಮಾತನಾಡಿ, ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿಷೇಧಿಸುವ ನಿಟ್ಟಿನಲ್ಲಿ ೧೯೮೬ರಲ್ಲಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ೧೪ ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಉಚಿತ ಶಿಕ್ಷಣ ಸಿಗಬೇಕೆಂಬುದು ಕಾನೂನಿನ ಆಶಯವಾಗಿದೆ ಎಂದು ಅಭಿಪ್ರಾಯಿಸಿದರು.

ತಾಲೂಕು ತಹಶೀಲ್ದಾರ್ ಎಸ್.ಎನ್. ನರಗುಂದ್, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕ ವೆಂಕಟೇಶ್, ಕಾರ್ಮಿಕ ಇಲಾಖೆಯ ಅಧಿಕಾರಿ ಲೀನಾ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.