ಪಕ್ಷ ವಿರೋಧಿ ಚಟುವಟಿಕೆ: ೧೧ ಮಂದಿಗೆ ಬಿಜೆಪಿ ನೋಟೀಸ್

ಬೆಂಗಳೂರು, ಜೂ. ೩೦: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಹಾಗೂ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಹನ್ನೊಂದು ಮಂದಿಗೆ ಬಿಜೆಪಿ ನೋಟೀಸ್ ಜಾರಿ ಮಾಡಿದೆ. ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ತನಿಖೆ ನಡೆಸಿ, ಸಂಬAಧಪಟ್ಟವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಪಕ್ಷ ನಿರ್ಧರಿಸಿದೆ. ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಬಿಜೆಪಿ ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಚುನಾವಣೆ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ವಿಚಾರಣೆ ನಡೆಸಿ ಶಿಸ್ತು ಕ್ರಮ ಜರುಗಿಸಲು ನಿರ್ಧರಿ ಸಲಾಗಿದೆ. ಪಕ್ಷಕ್ಕೆ ಮುಜುಗರ ಉಂಟು ಮಾಡುವ ಹೇಳಿಕೆ ನೀಡುತ್ತಿರುವವರ ಜತೆ ಖುದ್ದು ಮಾತನಾಡಿದ್ದೇವೆ. ನೋಟೀಸ್ ಜಾರಿ ಮಾಡಲಾಗಿದ್ದು, ಮುಂದೆ ಇಂತಹ ಹೇಳಿಕೆ ನೀಡದಂತೆ ಸ್ಪಷ್ಟವಾಗಿ ತಿಳಿಸಲಾಗಿದೆ ಎಂದು ಕಟೀಲ್ ಸಭೆಯ ನಂತರ ತಿಳಿಸಿದರು. ಬಿಜೆಪಿಗೆ ಮುಜುಗರ ಉಂಟು ಮಾಡುವ ಹೇಳಿಕೆಗಳನ್ನು ಯಾರೂ ನೀಡಬಾರದು ಎಂದು ಪಕ್ಷದ ಕಾರ್ಯಕರ್ತರಿಗೆ ಸೂಚಿಸಲಾಗಿದೆ. ಅಂತಹ ಹೇಳಿಕೆ ನೀಡಿದವರನ್ನು ಕರೆಸಿ ಮಾತನಾಡಿದ್ದೇವೆ. ಇಂತಹ ಪರಿಸ್ಥಿತಿ ಬರದಂತೆ ಎಚ್ಚರಿಕೆ ವಹಿಸಿ, ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಯಡಿಯೂರಪ್ಪ ತಿಳಿಸಿದ್ದಾರೆ.

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಮೊಕದ್ದಮೆ

ಬೆಂಗಳೂರು, ಜೂ. ೩೦: ನೂತನ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಸುಧಾಕರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಬೆಂಗಳೂರಿನ ಮ್ಯಾಜಿಸ್ಟೆçÃಟ್ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿರುವ ಸುಧಾಕರ್ ಅವರು ಖಾಸಗಿ ದೂರು ಸಲ್ಲಿಸಿದ್ದಾರೆ. ಮಾಜಿ ಸಚಿವ ಸುಧಾಕರ್ ಅವರು ಸಲ್ಲಿಕೆ ಮಾಡಿರುವ ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ತಾ. ೪ ರಂದು ಮ್ಯಾಜಿಸ್ಟೆçÃಟ್ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಸಾರ್ವ ಜನಿಕವಾಗಿ ಮಾನಹಾನಿ ಮಾಡುವ ರೀತಿಯಲ್ಲಿ ಮಾತನಾಡುವುದರ ಜೊತೆಗೆ, ಸೋಶಿಯಲ್ ಮೀಡಿಯಾದಲ್ಲಿ ಹಾಗೂ ಮಾಧ್ಯಮಗಳ ಸಂದರ್ಶ ನದಲ್ಲಿ ಮಾನಹಾನಿ ರೀತಿ ಮಾತನಾಡುತ್ತಿದ್ದಾರೆ. ಈ ಮೂಲಕ ಘನತೆಗೆ ತೇಜೋವಧೆ ಮಾಡುತ್ತಾ ಇದ್ದಾರೆ. ಹೀಗಾಗಿ ಪ್ರದೀಪ್ ಈಶ್ವರ್ ವಿರುದ್ಧ ಕ್ರಮಕ್ಕೆಕೈಗೊಳ್ಳಿ ಎಂದಿದ್ದಾರೆ. ಅಲ್ಲದೆ ತನ್ನ ವಿರುದ್ಧ ಮಾತನಾಡದಂತೆ ನಿರ್ಬಂಧ ಹೇರಲು ಸುಧಾಕರ್ ಮನವಿ ಮಾಡಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೆ. ಸುಧಾಕರ್ ಅವರನ್ನು ಮಣಿಸಿ ಪ್ರದೀಪ್ ಈಶ್ವರ್ ಶಾಸಕರಾಗಿದ್ದಾರೆ. ತಮ್ಮ ತೆಲುಗು ಡೈಲಾಗ್‌ಗಳಿಂದಲೇ ಚುನಾವಣಾ ಪ್ರಚಾರದ ವೇಳೆ ಪ್ರದೀಪ್ ಈಶ್ವರ್ ಗಮನ ಸೆಳೆದಿದ್ದರು. ಸದ್ಯ ಅವರ ಡೈಲಾಗ್ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ.

ಅಕ್ರಮ ಆಸ್ತಿ ಗಳಿಕೆ ಆರೋಪ: ತಹಶೀಲ್ದಾರ್ ಲೋಕಾಯುಕ್ತ ಪೊಲೀಸ್ ವಶಕ್ಕೆ!

ಬೆಂಗಳೂರು, ಜೂ. ೩೦: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಕೆ.ಆರ್. ಪುರದ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಆದಾಯಕ್ಕೂ ಮೀರಿದ ಆಸ್ತಿಗಳಿಕೆ ಹಿನ್ನೆಲೆ ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ರೈ ಬಂಧನವಾಗಿತ್ತು. ಇಂದು ಅಜಿತ್ ರೈ ಯನ್ನು ಪೊಲೀಸರು ಕೋರ್ಟ್ಗೆ ಹಾಜರುಪಡಿಸಿದ್ದು, ೧೦ ದಿನಕ್ಕೆ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಸಲ್ಲಿಸಿದ್ದರು. ಆದರೆ ೭ ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ನಗರದ ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬರೋಬ್ಬರಿ ೪೦ ಲಕ್ಷಕ್ಕೂ ಹೆಚ್ಚು ನಗದು ಸೇರಿದಂತೆ ವಿವಿಧ ಅಕ್ರಮ ಆಸ್ತಿಗಳನ್ನು ಪತ್ತೆ ಹಚ್ಚಿದ್ದರು. ಅಜಿತ್ ರೈಗೆ ಸೇರಿದ ೧೦೦ ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಸಿಕ್ಕಿದ್ದವು. ಅಜಿತ್ ರೈ ಸಂಬAಧಿಕರು, ಸ್ನೇಹಿತರ ಹೆಸರಲ್ಲೂ ಆಸ್ತಿ ಪತ್ರಗಳು, ಆಪ್ತರ ಮನೆಯಲ್ಲಿ ನಾಲ್ಕು ಫಾರ್ಚೂನರ್ ಕಾರುಗಳು ಪತ್ತೆಯಾಗಿವೆ. ಅಜಿತ್ ಆಸ್ತಿಪತ್ರಗಳನ್ನು ಕಂಡು ಅಧಿಕಾರಿಗಳೇ ದಂಗಾಗಿದ್ದರು. ನಿನ್ನೆ ತಹಶೀಲ್ದಾರ್ ಅಜಿತ್ ರೈ ಬಂದಿಸಿದ್ದ ಪೊಲೀಸರು ನಂತರ ಕೋರ್ಟ್ಗೆ ಹಾಜರುಪಡಿಸಿದ್ದರು.

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ಸಿಎಂ ರಾಜೀನಾಮೆ ಸಾಧ್ಯತೆ

ಮಣಿಪುರ, ಜೂ. ೩೦: ಕಳೆದ ೫೮ ದಿನಗಳಿಂದ ಹಿಂಸಾಚಾರದ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದೆ. ಹಿಂಸಾಚಾರ ನಿಲ್ಲದಿದ್ದರೆ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ರಾಜೀನಾಮೆ ನೀಡುವಂತೆ ಎಲ್ಲಾ ವಿರೋಧ ಪಕ್ಷಗಳು ಒತ್ತಡ ಹೇರುತ್ತಿವೆ. ರಾಜ್ಯದಲ್ಲಿ ಸುಮಾರು ಎರಡು ತಿಂಗಳ ಕಾಲ ಅಶಾಂತಿ ನೆಲೆಸಿದ್ದು, ರಾಜ್ಯದಲ್ಲಿ ಶಾಂತಿ ನೆಲೆಸುವಲ್ಲಿ ವಿಫಲರಾಗಿರುವ ಅವರು ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಣಿಪುರಕ್ಕೆ ಭೇಟಿ ನೀಡಿದ ಎರಡನೇ ದಿನದಂದು ರಾಜ್ಯಪಾಲರನ್ನು ಭೇಟಿಯಾದರು. ಮಣಿಪುರದ ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು. ಮಣಿಪುರದಲ್ಲಿ ಶಾಂತಿ ನೆಲೆಸುವ ಅಗತ್ಯವಿದೆ ಎಂದು ಹೇಳಿದ್ದರು.