ಮಡಿಕೇರಿ, ಜು. ೧: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೊಳಕೇರಿ ಬಸ್ ನಿಲ್ದಾಣದ ಬಳಿ ನಿನ್ನೆ ದಿನ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳಾದ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ನಿವಾಸಿ ಯೂಸುಫ್ (೫೨) ಹಾಗೂ ಕೇರಳ ಮೂಲಕ ರಜಾಕ್ (೪೨) ಎಂಬವರುಗಳನ್ನು ಬಂಧಿಸಿ, ೩೦೫ ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಎಸ್ಪಿ ಕೆ. ರಾಮರಾಜನ್ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಡಿವೈಎಸ್ಪಿ ಎಂ. ಜಗದೀಶ್, ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ನಾಪೋಕ್ಲು ಠಾಣಾಧಿಕಾರಿ ಈ. ಮಂಜುನಾಥ್ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.