ಚೆಯ್ಯAಡಾಣೆ, ಜು. ೧: ಕೊಳಕೇರಿ ಗ್ರಾಮದ ರಸ್ತೆ ಬದಿಯಲ್ಲಿ ಗಾಂಜಾ ಸೇವನೆ ಮಾಡುತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಕ್ಕಬ್ಬೆ ಕುಂಜಿಲ ಗ್ರಾಮದ ನಿವಾಸಿ ಎನ್.ಕೆ. ಹಾರಿಸ್ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ರಾಮರಾಜನ್ ಮತ್ತು ಹೆಚ್ಚುವರಿ ಪೊಲೀಸ್ ಉಪ ಅಧೀಕ್ಷಕ ಸುಂದರ್ ರಾಜ್ ನಿರ್ದೇಶನದಂತೆ, ಡಿವೈಎಸ್ಪಿ ಜಗದೀಶ್, ಮಡಿಕೇರಿ ಗ್ರಾಮಾಂತರ ವೃತ ನಿರೀಕ್ಷಕ ಅನೂಪ್ ಮಾದಪ್ಪ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಸಿಬ್ಬಂದಿಗಳಾದ ಲವಕುಮಾರ್, ಶರತ್ ಕುಮಾರ್, ರಾಜೇಶ್, ಶಿವಕುಮಾರ್, ಪ್ರದೀಪ್ ಕುಮಾರ್, ಗಿರೀಶ್, ಚಾಲಕ ಷರೀಫ್ ಪಾಲ್ಗೊಂಡಿದ್ದರು.