ಮಡಿಕೇರಿ, ಜು. ೧: ಕುಡಿದ ಮಸ್ತಿನಲ್ಲಿ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕಟ್ಟಡದಿಂದ ಬಿದ್ದು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.
ನಗರದ ಇಂದಿರಾಗಾAಧಿ ವೃತ್ತದ ಸಮೀಪದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಮೇಲೆ ಮದ್ಯ ಸೇವಿಸಲೆಂದು ತೆರಳಿ ಮದ್ಯ ಕುಡಿದು ಕೆಳಗಿಳಿಯುವಾಗ ಆಕಸ್ಮಿಕವಾಗಿ ೨ನೇ ಮಹಡಿಯಿಂದ ಬಿದ್ದು ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.
ಪ್ರತ್ಯಕ್ಷದರ್ಶಿಗಳ ಪ್ರಕಾರ ಗುಜರಿ ಅಂಗಡಿಯೊAದಕ್ಕೆ ತೆರಳಿ ಗುಜರಿ ವಸ್ತು ಮಾರಾಟ ಮಾಡಿ ಕುಡಿಯಲೆಂದು ಕಟ್ಟಡದ ಮೇಲ್ಭಾಗಕ್ಕೆ ತೆರಳಿದ್ದಾನೆ ಎಂದು ತಿಳಿದು ಬಂದಿದೆ.
ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ವಾರಿಸುದಾರರಿದ್ದಲ್ಲಿ ಮಡಿಕೇರಿ ನಗರ ಠಾಣೆಯನ್ನು ಸಂಪರ್ಕಿಸುವAತೆ ಪೊಲೀಸರು ಮನವಿ ಮಾಡಿದ್ದಾರೆ.