ಕರಿಕೆ, ಜು. ೧: ಇಲ್ಲಿಗೆ ಸಮೀಪದ ಚೆತ್ತುಕಾಯ ಹದಿಮೂರನೇ ಮೈಲು ಗ್ರಾಮದಲ್ಲಿ ಕಳೆದ ರಾತ್ರಿ ಸುರಿದ ಮಳೆಗೆ ಮನೆಯ ಮೇಲ್ಛಾವಣಿ ಕುಸಿದಿದೆ. ಇಲ್ಲಿನ ನಿವಾಸಿ ಸುರೇಶ್ ಬಾಬು ಎಂಬವರ ವಾಸದ ಮನೆಯ ಒಂದು ಭಾಗ ಗೋಡೆ ಕುಸಿದು ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ.