ಸುಂಟಿಕೊಪ್ಪ, ಜು. ೧: ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸರಕಾರದ ನಿಯಮಗಳ ಅಡಿಯಲ್ಲಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವುದಾಗಿ ಶಾಸಕ ಡಾ.ಮಂಥರ್ಗೌಡ ಭರವಸೆ ನೀಡಿದರು.
ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದ ಅವರು ಆಸ್ಪತ್ರೆಯ ಕುರಿತು ಮಾಹಿತಿ ಪಡೆದರು.
ಆಸ್ಪತ್ರೆಯ ಹಿಂಭಾಗದಲ್ಲಿ ಬೆಳೆದು ನಿಂತಿರುವ ಕಾಡುಗಿಡ ಗಂಟಿಗಳನ್ನು ಕಡಿದು ಸ್ವಚ್ಛ ಮಾಡುವಂತೆ ಸೂಚಿಸಿದರಲ್ಲದೆ ೩ ದಿನಗಳ ಗಡವು ನೀಡಿದರು. ಸ್ವತಃ ವೈದ್ಯರಾಗಿರುವ ಡಾ. ಮಂಥರ್ ಗೌಡ ಆಸ್ಪತ್ರೆಯಲ್ಲಿನ ಹೊರರೋಗಿಗಳು ಮತ್ತು ಒಳ ರೋಗಿಗಳನ್ನು ಮಾತನಾಡಿಸಿ ಅವರಲ್ಲಿ ಜ್ವರದಿಂದ ಬಳಲುತ್ತಿರುವವರ ಸ್ಥಿತಿ ಗತಿ ಬಗ್ಗೆ ಮಾಹಿತಿ ಪಡೆದರು. ಇದೇ ಆರೋಗ್ಯ ಇಲಾಖೆಯ ಸಿಬ್ಬಂದಿಗಳೂ ಅನಾರೋಗ್ಯ ಒಳಗಾಗಿರುವ ಕುರಿತು ಮಾಹಿತಿ ಪಡೆದು ಆರೋಗ್ಯ ಕೇಂದ್ರದ ಆವರಣದ ಅಶುಚಿತ್ವದ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ದೂರವಾಣಿ ಮೂಲಕ ಪ್ರಶ್ನಿಸಿ, ಸೂಕ್ತ ಕ್ರಮಕೈಗೊಳ್ಳುವಂತೆ ಸೂಚಿಸಿದರು.
ಈ ಪ್ರಾಥಮಿಕ ಆರೋಗ್ಯ ಕೇಂದ್ರವು ರಾಷ್ಟಿçÃಯ ಹೆದ್ದಾರಿ ಬದಿಯಲ್ಲಿದ್ದು ನಿತ್ಯ ಅಪಘಾತಗಳು ಇನ್ನಿತರ ತುರ್ತು ಸಂದರ್ಭದಲ್ಲಿ ಆಂಬ್ಯುಲೆನ್ಸ್ ಸೇರಿದಂತೆ ಯಾವುದೇ ತುರ್ತು ಸೇವೆಗಳು ಲಭ್ಯವಾಗುವುದಿಲ್ಲ. ಇದರಿಂದ ಈ ಭಾಗದ ಜನತೆ ಸಂಕಷ್ಟ ಎದುರಿಸುವಂತಾಗಿದೆ ಎಂದು ಜಿ.ಪಂ. ಮಾಜಿ ಸದಸ್ಯ ಪಿ.ಎಂ.ಲತೀಫ್, ಗ್ರಾ.ಪಂ. ಸದಸ್ಯರಾದ ಪಿ.ಎಫ್.ಸಬಾಸ್ಟೀನ್, ರಫೀಕ್ಖಾನ್ ಶಾಸಕರ ಗಮನ ಸಳೆದರು.
ಸುಂಟಿಕೊಪ್ಪ ಆರೋಗ್ಯ ಕೇಂದ್ರದಲ್ಲಿ ಜ್ವರದ ಸಮಸ್ಯೆಯಿಂದ ಬಳಲುವವರ ಸಂಖ್ಯೆ ಹೆಚ್ಚುತ್ತಿದ್ದು ಕೆಲವರಿಗೆ ಡೆಂಗ್ಯೂವಿಗೆ ಸಮೀಪವಾದ ಲಕ್ಷಣಗಳು ಕಂಡು ಬಂದಿವೆ ಎಂಬ ಮಾಹಿತಿ ಪಡೆದ ಶಾಸಕರು ಆಸ್ಪತ್ರೆಯ ಒಳಗೂ ಸೊಳ್ಳೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಸೊಳ್ಳೆ ನಿರೋಧಕ ಬತ್ತಿಗಳನ್ನು ತಂದು ಬಳಸುವಂತೆ ಸೂಚಿಸಿದರು. ಆರೋಗ್ಯ ಕೇಂದ್ರದ ಆವರಣದಲ್ಲಿರುವ ಹಳೆಯ ಮತ್ತು ಶಿಥಿಲವಾಗಿರುವ ಕಟ್ಟಡಗಳನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣಕ್ಕೆ ಸರಕಾರದ ಗಮನ ಸೆಳೆಯುವುದಾಗಿ ಡಾ. ಮಂಥರ್ಗೌಡ ಹೇಳಿದರು.
ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ಉತ್ತಮವಾಗಿ ಜನಮಾನಸದಲ್ಲಿ ಉಳಿಯುವಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರವೀಂದ್ರ ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಗ್ರಾ.ಪಂ. ಸದಸ್ಯ ಪಿ.ಎಫ್.ಸಬಾಸ್ಟೀನ್ ಹಾಗೂ ರಫೀಕ್ಖಾನ್ ಕಸ ಸಂಗ್ರಹ ವಾಹನಗಳು ಕೆಟ್ಟು ನಿಂತಿರುವುದರಿAದ ಪಟ್ಟಣದ ಕೆಲವು ವಾರ್ಡ್ಗಳಲ್ಲಿ ಕಸ ವಿಲೇವಾರಿಯಾಗುತ್ತಿಲ್ಲ ಎಂದು ಶಾಸಕರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ವಾಹನಗಳು ಉಪಯೋಗಕ್ಕೆ ಯೋಗ್ಯವಿಲ್ಲವೆಂದು ದೃಢೀಕರಣ ಪತ್ರ ಒದಗಿಸಿದಲ್ಲಿ ನೂತನ ವಾಹನ ಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು.