ಮಡಿಕೇರಿ, ಜು. ೧: ಕರ್ತವ್ಯ ಲೋಪದ ಆರೋಪ ಹೊತ್ತಿದ್ದ ಮಡಿಕೇರಿ ಉಪವಿಭಾಗದ ಲೋಕೋಪಯೋಗಿ ಇಲಾಖೆ ಕಿರಿಯ ಅಭಿಯಂತರ ಕೆ.ಎಲ್. ದೇವರಾಜು ಅವರನ್ನು ಅಮಾನತ್ತುಗೊಳಿಸಿ ಸಂಪರ್ಕ ಮತ್ತು ಕಟ್ಟಡಗಳು (ದಕ್ಷಿಣ) ವಿಭಾಗದ ಮುಖ್ಯ ಇಂಜಿನಿಯರ್ ವಿ. ಗೋವಿಂದರಾಜು ಆದೇಶಿಸಿದ್ದಾರೆ.

ಈ ಕುರಿತು ಸರಕಾರಕ್ಕೆ ಸಲ್ಲಿಕೆಯಾಗಿರುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದ್ದು, ಮೇಲ್ನೋಟಕ್ಕೆ ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಎದುರಿನ ತಡೆಗೋಡೆ ಕಳಪೆ ಕಾಮಗಾರಿ, ಗ್ರೇಟರ್ ರಾಜಾಸೀಟ್ ಯೋಜನೆಯಲ್ಲಿ ನಕಲಿ ಎಂ.ಬಿ. ಪುಸ್ತಕಗಳ ಬಳಕೆ, ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಪಾಲ ಕಾಲೋನಿಯಲ್ಲಿ ಎಸ್‌ಇಪಿ, ಟಿಎಸ್‌ಪಿ ಅನುದಾನ ಬೇರೆಡೆ ನಿರ್ವಹಿಸಿ ದುರ್ಬಳಕೆ ಮಾಡಿ ಕರ್ತವ್ಯ ಲೋಪ ಎಸಗಿರುವುದು ಕಂಡುಬAದಿದೆ. ಕರ್ನಾಟಕ ನಾಗರಿಕ ಸೇವಾ ನಿಯಮಗಳು ೧೯೫೭ರ ನಿಯಮ ೧೦ (೧-ಡಿ) ಅನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಇವರ ವಿರುದ್ಧ ಇಲಾಖಾ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತ್ತುಗೊಳಿಸಿ ಸ್ಥಾನವನ್ನು ಬೇರೆ ಕಡೆ ವರ್ಗಾಯಿಸಲು ತೀರ್ಮಾನಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಅದೇ ರೀತಿ ಅಮಾನತ್ತಿನ ಅವಧಿಯಲ್ಲಿ ಅಮಾನತ್ತುಗೊಂಡ ಅಧಿಕಾರಿ ನಿಯಮಾನುಸಾರ ಜೀವನಾಧಾರ ಭತ್ಯೆಗೆ ಅರ್ಹರಾಗಿರುತ್ತಾರೆ. ಸಕ್ಷಮ ಪ್ರಾಧಿಕಾರ ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಉಲ್ಲೇಖಿಸಿದ್ದಾರೆ.

ವೀರಾಜಪೇಟೆ ಶಾಸಕ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಈ ಸಂಬAಧ ಮನವಿ ನೀಡಿ ಅಮಾನತ್ತಿಗೆ ಆಗ್ರಹಿಸಿದ್ದರು. ಜೊತೆಗೆ ಕಾಂಗ್ರೆಸ್ ವಕ್ತಾರ ತೆನ್ನೀರ ಮೈನಾ ಈ ವ್ಯಕ್ತಿಯ ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸಿದ್ದರು.