ಕೂಡಿಗೆ, ಜು. ೧: ಕೂಡು ಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಗ್ರಾಮ ದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ., ಶಾಲೆಯ ಕನ್ನಡ ಭಾಷಾ ಸಂಘ ಹಾಗೂ ವಿದ್ಯಾರ್ಥಿ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡರ ೫೧೪ನೇ ಜಯಂತಿ ಯನ್ನು ಸರಳವಾಗಿ ಆಚರಿಸಲಾಯಿತು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್, ಬೆಂಗಳೂರು ನಗರದ ನಿರ್ಮಾತೃ ಕೆಂಪೇಗೌಡರ ದೂರದೃಷ್ಠಿಯಿಂದ ಬೆಂಗಳೂರು ಇಂದು ಬೃಹತ್ತಾಗಿ ಬೆಳೆದಿದೆ.
ಬೆಂಗಳೂರು ನಗರ ನಿರ್ಮಾಣಕ್ಕೆ ನೀಡಿದ ಆದ್ಯತೆಯನ್ನು ಕೆರೆಗಳ ನಿರ್ಮಾಣಕ್ಕೂ ನೀಡಿದ್ದಾರೆ ಎಂದರು.
ಶಿಕ್ಷಕರಾದ ಎಂ.ಟಿ. ದಯಾನಂದ ಪ್ರಕಾಶ್, ಬಿ.ಡಿ. ರಮ್ಯ, ಬಿ.ಎಸ್. ಅನ್ಸಿಲಾ ರೇಖಾ, ನಯನ ಇದ್ದರು.